Home
ಸುದ್ದಿಜಾಲ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಫೋನ್‌ಗಳಿಗೆ ಟೆಕ್ನೋ ಕಂಪೆನಿ ಪ್ರಸಿದ್ಧಿಯನ್ನು ಪಡೆದಿದೆ. ಟೆಕ್ನೋ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸುತ್ತಾ ಬಂದಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ ಸದ್ಯ ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ವೇದಿಕೆ ಸಿದ್ಧಪಡಿಸಿದೆ. ಈ ಸ್ಮಾರ್ಟ್‌ಫೋನ್‌ನ ಅಮೆಜಾನ್‌ ಲ್ಯಾಂಡಿಂಗ್‌ ಪೇಜ್‌ ಈಗಾಗಲೇ ಲೈವ್‌ ಆಗಿದೆ.

ಟೆಕ್ನೋ ಸ್ಪಾರ್ಕ್‌ 9T

ಹೌದು, ಟೆಕ್ನೋ ಕಂಪೆನಿಯ ಹೊಸ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ನ ಅಮೆಜಾನ್‌ನ ಲ್ಯಾಂಡಿಂಗ್ ಪೇಜ್‌ ಲೈವ್ ಆಗಿದೆ. ಇದರಿಂದ ಟೆಕ್ನೋ ಸ್ಪಾರ್ಕ್ 9T ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಅನ್ನೊದು ಖಚಿತವಾಗಿದೆ. ಆದರೆ ಅಮೆಜಾನ್‌ ಲ್ಯಾಂಡಿಂಗ್‌ ಪೇಜ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಲಾಂಚ್‌ ಡೇಟ್‌ ಬಹಿರಂಗವಾಗಿಲ್ಲ. ಆದರೆ ಲ್ಯಾಂಡಿಂಗ್‌ ಪೇಜ್‌ನಲ್ಲಿ ಸ್ಮಾರ್ಟ್‌ಫೋನಿನ ವಿಶೇಷತೆಗಳ ಬಗ್ಗೆ ಉಲ್ಲೇಖಿಸಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ವಾಟರ್‌-ಡ್ರಾಪ್‌ ಸ್ಟೈಲ್‌ ನಾಚ್‌ನೊಂದಿಗೆ ಬರಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ ಎಂದು ಖಚಿತಪಡಿಸಲಾಗಿದೆ. ಇದಲ್ಲದೆ ಈ ಫೋನ್‌ ಅನ್ನು ಲಾಕ್ ಮಾಡಲು ಮತ್ತು ಅನ್‌ಲಾಕ್ ಮಾಡಲು ಸೈಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡಲಾಗಿದೆ. ಜೊತೆಗೆ ಈ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿರಲಿದೆ?

ಡಿಸ್‌ಪ್ಲೇ ಹೇಗಿರಲಿದೆ?

ಅಮೆಜಾನ್ ಲ್ಯಾಂಡಿಂಗ್ ಪೇಜ್‌ನ ಮಾಹಿತಿಯಂತೆ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಇದು ಡಾಟ್‌ನಾಚ್‌ ಡಿಸ್‌ಪ್ಲೇ ಆಗಿದ್ದು, 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 84.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ ಏನು?

ಪ್ರೊಸೆಸರ್‌ ಬಲ ಏನು?

ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 3GB ವರ್ಚುವಲ್ RAM ಅನ್ನು ವಿಸ್ತರಿಸಬಹುದಾಗಿದೆ. ಇದರಿಂದ ಒಟ್ಟು 7GB RAM ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಜೊತೆಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನುಳಿದ ಕ್ಯಾಮೆರಾ ಸೆನ್ಸಾರ್‌ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹಾಗೆಯೇ ಸೆಲ್ಫಿ ಕ್ಯಾಮೆರಾ ಹೇಗಿರಲಿದೆ ಎನ್ನುವ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?

ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಒಂದು ಗಂಟೆಗಿಂತ ಕಡಿಮೆ ಅವಧಿಯ ಚಾರ್ಜಿಂಗ್‌ನಲ್ಲಿ ಸ್ಮಾರ್ಟ್‌ಫೋನ್ ಶೇಕಡಾ 50 ರಷ್ಟು ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಹ್ಯಾಂಡ್‌ಸೆಟ್ ಅನ್ನು ಲಾಕ್ ಮಾಡಲು ಮತ್ತು ಅನ್‌ಲಾಕ್ ಮಾಡಲು ಸೈಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಮಾರ್ಕ್‌ 9T ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರದಲ್ಲೇ ಲಾಂಚ್‌ ಆಗಲಿದೆ ಎಂದು ಅಮೆಜಾನ್‌ ಲ್ಯಾಂಡಿಂಗ್‌ ಪೇಜ್‌ ದೃಡಪಡಿಸಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ. ಅಮೆಜಾನ್ ಅಧಿಕೃತವಾಗಿ ಬೆಲೆ ಅಥವಾ ಭಾರತದಲ್ಲಿ ಬಿಡುಗಡೆ ಟೈಮ್‌ಲೈನ್ ಅನ್ನು ಘೋಷಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಈ ವರ್ಷದ ಜೂನ್‌ನಲ್ಲಿ ನೈಜೀರಿಯಾದಲ್ಲಿ ಲಾಂಚ್‌ ಆಗಿದೆ. ನೈಜೀರಿಯಾದಲ್ಲಿ ಇದರ ಆರಂಭಿಕ ಬೆಲೆ 4GB RAM + 64GB ಸ್ಟೋರೇಜ್‌ ಆಯ್ಕೆಗೆ NGN 78,300 (ಅಂದಾಜು 14,700ರೂ) ಇದೆ ಎಂದು ವರದಿಯಾಗಿದೆ. ಇದು ಅಟ್ಲಾಂಟಿಕ್ ಬ್ಲೂ, ಕೊಕೊ ಗೋಲ್ಡ್, ಐರಿಸ್ ಪರ್ಪಲ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ ಎನ್ನಲಾಗಿದೆ.

ಟೆಕ್ನೋ

ಇನ್ನು ಟೆಕ್ನೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಟೆಕ್ನೋ ಸ್ಮಾರ್ಕ್‌ 9 ಸರಣಿಯಲ್ಲಿ ಹೊಸ ಟೆಕ್ನೋ ಸ್ಪಾರ್ಕ್‌ 9 ಅನ್ನು ಲಾಂಚ್‌ ಮಾಡಿದೆ. ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ G37 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಫೋನ್‌ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ DTS ಹೊಂದಿರುವ ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ ವರ್ಚುವಲ್‌ 5GB RAM ಅನ್ನು ಕೂಡ ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

Best Mobiles in India

English summary
Tecno Spark 9T is confirmed to launch in India soon as the Amazon landing page of the smartphone has gone live.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+