Just In
- 16 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 18 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 18 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 20 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Movies
Breaking: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9T ಬಿಡುಗಡೆ!..ಬೆಲೆ 9,299 ರೂ. ಮಾತ್ರ!
ಟೆಕ್ನೋ ಕಂಪೆನಿ ಮೊಬೈಲ್ ಮಾರುಕಟ್ಟೆಯಲ್ಲಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಆಕರ್ಷಕ ಡಿಸ್‌ಪ್ಲೇ ವಿನ್ಯಾಸ, ಪ್ರೊಸೆಸರ್ ಹಾಗೂ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಒಳಗೊಂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ.

ಹೌದು, ಟೆಕ್ನೋ ಸಂಸ್ಥೆ ಭಾರತದಲ್ಲಿ ಹೊಸ ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ವಿಸ್ತರಣೆ ಮಾಡುವ ಅವಕಾಶವನ್ನು ಕೂಡ ನೀಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ನಲ್ಲಿ ಒಟ್ಟು 7GB RAM ಅನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಇನ್ನು ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇನ್ನು ರಿಯರ್ ಪ್ಯಾನಲ್‌ನಲ್ಲಿ ಸಮತಲವಾದ ಕ್ಯಾಮೆರಾ ಮಾಡ್ಯೂಲ್ ಅನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದ್ದು, ವಿಶೇಷ ಲಾಂಚ್ ಪ್ರೈಸ್‌ನಲ್ಲಿ 9,299 ರೂ.ಬೆಲೆಯನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲದಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 90.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 401ppi ಅನ್ನು ಹೊಂದಿದ್ದು, ಡಾಟ್‌ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಪಡೆದಿದೆ.

ಪ್ರೊಸೆಸರ್ ಬಲ ಏನು?
ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಅಮೆಜಾನ್ ಪೇಜ್‌ನಲ್ಲಿ ಲೈವ್ ಆಗಿದೆ. ಲೈವ್ ಪೇಜ್‌ನಲ್ಲಿನ ಮಾಹಿತಿಯಂತೆ ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧರಿಸಿ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಜೊತೆಗೆ 3GB ವರ್ಚುವಲ್ RAM ಅನ್ನು ವಿಸ್ತರಿಸಬಹುದಾಗಿದೆ. ಇದರಿಂದ ಒಟ್ಟು RAM ಗಾತ್ರ 7GB RAM ಆಗಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸ್ಟೋರೇಜ್ ಗಾತ್ರವನ್ನು 512GB ವರೆಗೆ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಯಾವುದು?
ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದು ಎಲ್ಇಡಿ ಫ್ಲ್ಯಾಷ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪೋಟ್ರೇಟ್ ಯೂನಿಟ್ ಮತ್ತು ಮೂರನೇ ಕ್ಯಾಮೆರಾ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಫ್ರಂಟ್ ಫೇಸಿಂಗ್ ಸೆಲ್ಫಿ ಕ್ಯಾಮೆರಾ ಇದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ? ಇತರೆ ಫೀಚರ್ಸ್‌ಗಳೇನು?
ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಒಂದು ಗಂಟೆಗಿಂತ ಕಡಿಮೆ ಅವಧಿಯ ಚಾರ್ಜಿಂಗ್‌ನಲ್ಲಿ ಸ್ಮಾರ್ಟ್‌ಫೋನ್ ಶೇಕಡಾ 50 ರಷ್ಟು ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಹ್ಯಾಂಡ್‌ಸೆಟ್ ಅನ್ನು ಲಾಕ್ ಮಾಡಲು ಮತ್ತು ಅನ್‌ಲಾಕ್ ಮಾಡಲು ಸೈಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9T ಸ್ಮಾರ್ಟ್‌ಫೋನ್ ಲಾಂಚ್ ಪ್ರೈಸ್‌ಟ್ಯಾಗ್‌ನಲ್ಲಿ 9,299ರೂ. ಬೆಲೆ ಹೊಂದಿದೆ. ಇದು ಲಾಂಚ್ ಪ್ರೈಸ್ ಟ್ಯಾಗ್ ಆಗಿದ್ದು, ಈ ಬೆಲೆ ಎಷ್ಟು ದಿನಗಳ ವರೆಗೆ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಈ ಸ್ಮಾರ್ಟ್‌ಫೋನ್ ಅನ್ನು ನೀವು ಟರ್ಕೋಯಿಸ್ ಸಯಾನ್, ಅಟ್ಲಾಂಟಿಕ್ ಬ್ಲೂ, ಐರಿಸ್ ಪರ್ಪಲ್ ಮತ್ತು ಟಹೀಟಿ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಟೆಕ್ನೋ ಸ್ಪಾರ್ಕ್ 9T ಆಗಸ್ಟ್ 5ರಿಂದ ಅಮೆಜಾನ್‌ನ್ ಸೈಟ್‌ನಲ್ಲಿ ತನ್ನ ಮೊದಲ ಸೇಲ್ ನಡೆಸಲಿದೆ.

ಟೆಕ್ನೋ ಕಂಪೆನಿ ಈಗಾಗಲೇ ಜುಲೈ ತಿಂಗಳಿನಲ್ಲಿಯೇ ಭಾರತದಲ್ಲಿ ತನ್ನ ಟೆಕ್ನೋ ಸ್ಮಾರ್ಕ್ 9 ಸರಣಿಯಲ್ಲಿ ಹೊಸ ಟೆಕ್ನೋ ಸ್ಪಾರ್ಕ್ 9 ಅನ್ನು ಲಾಂಚ್ ಮಾಡಿತ್ತು. ಈ ಸ್ಮಾರ್ಟ್‌ಫೋನ್ ತನ್ನ ವಿಶೇಷ ಫೀಚರ್ಸ್‌ಗಳು ಹಾಗೂ ಬೆಲೆಯ ಕಾರಣಕ್ಕೆ ಸಾಕಷ್ಟು ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, 10,000ರೂ. ಒಳಗೆ ಲಭ್ಯವಾಗುವ ಆಕರ್ಷಕ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ ಅನ್ನು ಇನ್ಫಿನಿಟಿ ಬ್ಲಾಕ್ ಮತ್ತು ಸ್ಕೈ ಮಿರರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.

ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ G37 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು AI ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ DTS ಹೊಂದಿರುವ ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ ವರ್ಚುವಲ್ 5GB RAM ಅನ್ನು ಕೂಡ ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470