ಭಾರತದಲ್ಲಿ ಅಗ್ಗದ ಬೆಲೆಯ ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ ಲಾಂಚ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಟೆಕ್ನೋ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಟೆಕ್ನೋ ಸ್ಪಾರ್ಕ್ ಗೋ 2021 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಫೋನ್ ಆಗಿದ್ದು, ಸಿಂಗಲ್ RAM ಆಯ್ಕೆಯಲ್ಲಿ ಲಭ್ಯವಾಗಲಿದೆ. ಆದರೆ ಮೂರು ಬಣ್ಣಗಳ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್ ದೊರೆಯಲಿದೆ.

ಹೌದು, ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹೆಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಪಡೆದುಕೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಡಾಟ್ ನಾಚ್ ಡಿಸ್‌ಪ್ಲೇ ಆಗಿದ್ದು, ರಚನೆಯ ಅನುಪಾತ 20:9 ರಷ್ಟಿದೆ. ಜೊತೆಗೆ ಈ ಡಿಸ್‌ಪ್ಲೇ 480 ನಿಟ್ ಪೀಕ್ ಬ್ರೈಟ್‌ನೆಸ್ ಹೊಂದಿದೆ.

ಪ್ರೊಸೆಸರ್
ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್ / 1.8 ಲೆನ್ಸ್ ಹೊಂದಿದೆ. ದ್ವಿತೀಯ ಕ್ಯಾಮೆರಾದ ವಿವರಗಳು ಇನ್ನು ಕೂಡ ಸ್ಪಷ್ಟವಾಗಿಲ್ಲ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 4ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 4.2 ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ ಏಕೈಕ 2 GB RAM + 32GB ಶೇಖರಣಾ ಮಾದರಿಗೆ 7,299 ರೂ,ಬೆಲೆ ಹೊಂದಿದೆ. ಇನ್ನು ಈ ಟೆಕ್ನೋ ಫೋನ್ ಲಾಂಚ್ ಆಫರ್ ಅನ್ನು ಕೂಡ ಹೊಂದಿದ್ದು, ಲಾಂಚ್ ಆಫರ್‌ನಲ್ಲಿ 6,699 ರೂ ಗಳಿಗೆ ಖರೀದಿಸಬಹುದಾಗಿದೆ. ಇದು ಗ್ಯಾಲಕ್ಸಿ ಬ್ಲೂ, ಹರೈಸನ್ ಆರೆಂಜ್ ಮತ್ತು ಮಾಲ್ಡೀವ್ಸ್ ಬ್ಲೂ ಬಣ್ಣಗಳಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ಜುಲೈ 7 ರಿಂದ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಅಮೆಜಾನ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








