ಅಗ್ಗದ ಬೆಲೆಗೆ ಲಾಂಚ್ ಆಯ್ತು 'ಟೆಕ್ನೋ ಸ್ಪಾರ್ಕ್ ಗೋ 2023'!..ಪವರ್‌ಫುಲ್‌ ಬ್ಯಾಟರಿ!

|

ಅಗ್ಗದ ಸ್ಮಾರ್ಟ್‌ಫೋನ್‌ ಶ್ರೇಣಿಯ ಮೂಲಕ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿರುವ ಟೆಕ್ನೋ ಸಂಸ್ಥೆಯು ಇದೀಗ ಮತ್ತೆ ಹೊಸದಾಗಿ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಅದುವೇ ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ ಆಗಿದ್ದು, ಈ ಫೋನ್ ಈ ಹಿಂದಿನ ಟೆಕ್ನೋ ಸ್ಪಾರ್ಕ್ ಗೋ 2022 ಅಪ್‌ಗ್ರೇಡ್‌ ಆವೃತ್ತಿಯಾಗಿದೆ. ಅಂದಹಾಗೆ ಈ ಫೋನ್ ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೊ A22 SoC ಪ್ರೊಸೆಸರ್‌ ಪಡೆದಿದೆ.

ಅಗ್ಗದ ಬೆಲೆಗೆ ಲಾಂಚ್ ಆಯ್ತು 'ಟೆಕ್ನೋ ಸ್ಪಾರ್ಕ್ ಗೋ 2023'!.ಪವರ್‌ಫುಲ್‌ ಬ್ಯಾಟರಿ

ಹೌದು, ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಫೋನ್ 3GB RAM ಮತ್ತು 32GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. ಇದರೊಂದಿಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಡಾಟ್ ನಾಚ್ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರಶ್ ರೇಟ್ ಆಯ್ಕೆ ಅನ್ನು ಒಳಗೊಂಡಿದೆ. ಇದರೊಂದಿಗೆ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ.

ಅಗ್ಗದ ಬೆಲೆಗೆ ಲಾಂಚ್ ಆಯ್ತು 'ಟೆಕ್ನೋ ಸ್ಪಾರ್ಕ್ ಗೋ 2023'!.ಪವರ್‌ಫುಲ್‌ ಬ್ಯಾಟರಿ

ಪ್ರೊಸೆಸರ್‌ ಪವರ್ ಏನು
ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಇತ್ತೀಚಿನ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 3GB RAM + 32 GB ಮತ್ತು 4GB + 64GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿಯೂ ಸಹ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ.

ಡ್ಯುಯಲ್‌ ಕ್ಯಾಮೆರಾ ರಚನೆ
ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.85 ಅಪರ್ಚರ್ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾ QVGA ಬೆಂಬಲಿತ ಆಗಿದ್ದು, ಎಲ್‌ಇಡಿ ಫ್ಲ್ಯಾಶ್ ಆಯ್ಕೆ ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಬೇಸಿಕ್ ಫೋಟೊ ಎಡಿಟಿಂಗ್ ಆಯ್ಕೆಗಳು ಇರಲಿವೆ.

ಅಗ್ಗದ ಬೆಲೆಗೆ ಲಾಂಚ್ ಆಯ್ತು 'ಟೆಕ್ನೋ ಸ್ಪಾರ್ಕ್ ಗೋ 2023'!.ಪವರ್‌ಫುಲ್‌ ಬ್ಯಾಟರಿ

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಒಂದು ಪೂರ್ಣ ಚಾರ್ಜ್‌ ಸುಮಾರು 25 ಗಂಟೆಗಳ ಪ್ಲೇ ಬ್ಯಾಕ್‌ ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಎಲ್ ಟಿಇ, ವೈ-ಫೈ, ಬ್ಲೂಟೂತ್ ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 3GB RAM + 32 GB ಸ್ಟೋರೇಜ್‌ ಮಾದರಿ ಆಯ್ಕೆ ಹೊಂದಿದ್ದು, ಅದು 6,999ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ ಎಂಡ್‌ಲೆಸ್‌ ಬ್ಲ್ಯಾಕ್‌, ಬ್ಲೂ ಮತ್ತು ನೆಬುಲ್ಲಾ ಪರ್ಪಲ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Tecno Spark Go 2023 has been launched with three storage options. that are 3GB of RAM + 32GB, 3GB + 64GB and 4GB + 64GB. know more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X