ಟೆಕ್ನೋ ಸ್ಪಾರ್ಕ್ Go (2024) ಫೋನ್ ಅಮೆಜಾನ್‌ನಲ್ಲಿ ಸಖತ್ ಡಿಸ್ಕೌಂಟ್‌ನಲ್ಲಿ ಲಭ್ಯ!
ಜನಪ್ರಿಯ ಟೆಕ್ನೋ ಮೊಬೈಲ್ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಟೆಕ್ನೋ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಟೆಕ್ನೋ ಸ್ಪಾರ್ಕ್ Go (2024) ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಡಿಸ್ಕೌಂಟ್ ಬೆಲೆಗೆ ಖರೀದಿಗೆ ಲಭ್ಯ ಇದೆ.
ಹೌದು, ಟೆಕ್ನೋ ಸಂಸ್ಥೆಯ ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಸಖತ್ ಡಿಸ್ಕೌಂಟ್ ಪಡೆದಿದೆ. 6,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ 6,499ರೂ. ಗಳ ದರದಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವರ್ಚುವಲ್ RAM ಸಾಮರ್ಥ್ಯ ಪಡೆದಿದ್ದು, 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.

ಈ ಫೋನ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 (Go Edition) ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಅನ್ನು ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ. ಹಾಗಾದರೆ ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್‌ನ ಇತರೆ ಫೀಚರ್ಸ್ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ ಗೋ (2024) ಫೀಚರ್ಸ್ ಹೀಗಿವೆ
ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಇದ್ದು, ಪಾಂಡ ಸ್ಕ್ರೀನ್ ಪ್ರೊಟೆಕ್ಷನ್ ಪಡೆದಿದೆ. ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕಾರ್ಯನಿರ್ವಹಿಸುವ ಮತ್ತು ಅಧಿಸೂಚನೆಗಳನ್ನು ತೋರಿಸುವ ಡೈನಾಮಿಕ್ ಪೋರ್ಟ್ ಫೀಚರ್ಸ್ ಅನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್ ಗೋ (2024) ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 (Go Edition) ಆಧಾರಿತ HiOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಪಡೆದಿದೆ. ಇದಲ್ಲದೆ ಬಳಕೆದಾರರಿಗೆ ಬಳಕೆಯಾಗದ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳಲು ಅನುಮತಿಸುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಟೆಕ್ನೋ ಸ್ಪಾರ್ಕ್ ಗೋ (2024) ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಡ್ಯುಯಲ್ ಫ್ಲ್ಯಾಷ್ ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ ಗೋ (2024) ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಬಯೋಮೆಟ್ರಿಕ್ ಅನ್‌ಲಾಕಿಂಗ್‌ಗಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಹಾಗೆಯೇ DTS ಸೌಂಡ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳ ಆಯ್ಕೆ ಪಡೆದಿದೆ.
ಬೆಲೆ ಮತ್ತು ಲಭ್ಯತೆ ಟೆಕ್ನೋ ಸ್ಪಾರ್ಕ್ ಗೋ (2024) ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 3GB RAM + 64GB ಸ್ಟೋರೇಜ್, 8GB RAM + 64GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್ ಮಾದರಿಗಳ ಆಯ್ಕೆ ಪಡೆದಿದೆ. ಅಲ್ಲದೇ ಇದು ಗ್ರಾವಿಟಿ ಬ್ಲಾಕ್ ಮತ್ತು ಮಿಸ್ಟರಿ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








