Home
ಸುದ್ದಿಜಾಲ

ಟೆಕ್ನೋ ಕಂಪೆನಿಯ ಈ ಫೋನ್‌ ಮೇಲೆ ಭರ್ಜರಿ ಆಫರ್‌:..128GB ಸ್ಟೋರೇಜ್‌ ಆಯ್ಕೆ!

ಇತ್ತೀಚಿಗೆ ಬಿಡುಗಡೆ ಆಗಿರುವ ಟೆಕ್ನೋ ಸ್ಪಾರ್ಕ್‌ ಗೋ 2024 ಸ್ಮಾರ್ಟ್‌ಫೋನ್‌ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ವಿಭಿನ್ನ ಫೀಚರ್ಸ್‌ಗಳಿಂದ ಗಮನಸೆಳೆದಿರುವ ಈ ಫೋನ್‌ ಇದೀಗ ಅಮೆಜಾನ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಅಚ್ಚರಿಗೆ ದೂಡಿದೆ.

ಹೌದು, TECNO Spark GO 2024 ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯು ಸಾಕಷ್ಟು ಇಳಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಹಾಗಾದ್ರೆ ಟೆಕ್ನೋ ಸ್ಪಾರ್ಕ್‌ ಗೋ 2024 ಸ್ಮಾರ್ಟ್‌ಫೋನ್‌ ಮೇಲಿನ ಡಿಸ್ಕೌಂಟ್‌ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಕಂಪೆನಿಯ ಈ ಫೋನ್‌ ಮೇಲೆ ಭರ್ಜರಿ ಆಫರ್‌:..128GB ಸ್ಟೋರೇಜ್‌ ಆಯ್ಕೆ!

ಟೆಕ್ನೋ ಸ್ಪಾರ್ಕ್‌ ಗೋ 2024 ಡಿಸ್ಕೌಂಟ್‌ ಎಷ್ಟಿದೆ?
ಟೆಕ್ನೋ ಸ್ಪಾರ್ಕ್‌ ಗೋ 2024 ಸ್ಮಾರ್ಟ್‌ಫೋನಿನ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ ತಾಣದಲ್ಲಿ 8,499ರೂ ಬೆಲೆಯಲ್ಲಿ ಪಟ್ಟಿ ಮಾಡಲಾಗಿದೆ. ಆದರೆ ಇದೀಗ 14% ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ ಇದನ್ನು ಕೇವಲ 7,299ರೂ ಬೆಲೆಗೆ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಆಫರ್‌ ಕೂಡ ಲಭ್ಯವಾಗಲಿದೆ. ಇದರಿಂದ ಫೋನ್‌ನ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ.

ಟೆಕ್ನೋ ಸ್ಪಾರ್ಕ್‌ Go (2024) ಫೀಚರ್ಸ್‌ ಹೇಗಿದೆ?
ಟೆಕ್ನೋ ಸ್ಪಾರ್ಕ್‌ Go (2024) ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 720x1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇದಲ್ಲದೆ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕಾರ್ಯನಿರ್ವಹಿಸುವ ಡೈನಾಮಿಕ್ ಪೋರ್ಟ್ ಫೀಚರ್ಸ್‌ ಅನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ Go (2024) ಪ್ರೊಸೆಸರ್‌ ಯಾವುದು?

ಟೆಕ್ನೋ ಸ್ಪಾರ್ಕ್‌ Go (2024) ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 13 (Go Edition) ಆಧಾರಿತ HiOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಕಂಪೆನಿಯ ಈ ಫೋನ್‌ ಮೇಲೆ ಭರ್ಜರಿ ಆಫರ್‌:..128GB ಸ್ಟೋರೇಜ್‌ ಆಯ್ಕೆ!

ಟೆಕ್ನೋ ಸ್ಪಾರ್ಕ್‌ Go (2024) ಕ್ಯಾಮೆರಾ ಸೆಟ್‌ಅಪ್‌
ಟೆಕ್ನೋ ಸ್ಪಾರ್ಕ್‌ Go (2024) ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಡ್ಯುಯಲ್ ಫ್ಲ್ಯಾಷ್ ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್‌ Go (2024) ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್‌ Go (2024) ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಬಯೋಮೆಟ್ರಿಕ್ ಅನ್‌ಲಾಕಿಂಗ್‌ಗಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ DTS ಸೌಂಡ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಪ್ಯಾಕ್ ಮಾಡುತ್ತದೆ.

ಟೆಕ್ನೋ ಸ್ಪಾರ್ಕ್‌ Go (2024) ಕಲರ್‌ ಮತ್ತು ಆಯ್ಕೆ
ಟೆಕ್ನೋ ಸ್ಪಾರ್ಕ್‌ Go (2024) ಸ್ಮಾರ್ಟ್‌ಫೋನ್‌ ಮಿಸ್ಟರಿ ವೈಟ್ ಕಲರ್‌ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ. ಸದ್ಯ 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು 7,299ರೂ ಬೆಲೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
TECNO Spark GO 2024 Gets Massive Discount on Amazon: Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+