Home
ಸುದ್ದಿಜಾಲ

ಸದ್ಯದಲ್ಲೇ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌! ಫೀಚರ್ಸ್‌ ನಿರೀಕ್ಷೆ ಏನು?

ಸ್ಮಾರ್ಟ್‌ಫೋನ್‌ ವಲಯದಲ್ಲಿ ಟೆಕ್ನೋ ಕಂಪೆನಿಯ ಫೋನ್‌ಗಳಿಗೆ ಡಿಮ್ಯಾಂಡ್‌ ಇದೆ. ಅದಕ್ಕೆ ಅನುಗುಣವಾಗಿ ಟೆಕ್ನೋ ಕಂಪೆನಿ ಹಲವು ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಹೊಸ ಟೆಕ್ನೋ ಸ್ಪಾರ್ಕ್‌ ಗೋ (2024) ಫೋನ್‌ ಲಾಂಚ್‌ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಶೀಘ್ರದಲ್ಲೇ ಎಂಟ್ರಿ ನೀಡುವ ನಿರೀಕ್ಷೆಯಿದೆ.

ಹೌದು, ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು ಯುನಿಸೋಕ್‌ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌!

ಟೆಕ್ನೋ ಸ್ಪಾರ್ಕ್‌ ಗೋ (2024) ಡಿಸ್‌ಪ್ಲೇ ನಿರೀಕ್ಷೆ?
ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ 6.6-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,600 x 900 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್‌ ರೇಟ್‌ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನು ಸ್ಮಾರ್ಟ್‌ಫೋನ್‌ 263 ppi ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ ಗೋ (2024) ಪ್ರೊಸೆಸರ್‌ ಯಾವುದು?
ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ ಯುನಿಸೋಕ್‌ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಬಹುದು ಎಂದು ಹೇಳಲಾಗಿದೆ.

ಸದ್ಯದಲ್ಲೇ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌!

ಟೆಕ್ನೋ ಸ್ಪಾರ್ಕ್‌ ಗೋ (2024) ಕ್ಯಾಮೆರಾ ಸೆಟ್‌ಅಪ್‌
ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಡ್ಯುಯಲ್ LED ಫ್ಲ್ಯಾಷ್ ಲೆನ್ಸ್‌ಗಳ ಜೊತೆಗೆ ಹೆಚ್ಚುವರಿ AI- ಬೆಂಬಲಿತ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಡ್ಯುಯಲ್ LED ಫ್ಲ್ಯಾಷ್ ಲೆನ್ಸ್‌ನೊಂದಿಗೆ ಬರಲಿದೆ ಎಂದು ಹೇಳಲಾಗಿದೆ.

ಟೆಕ್ನೋ ಸ್ಪಾರ್ಕ್‌ ಗೋ (2024) ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB ಟೈಪ್-C ಬೆಂಬಲವನ್ನು ನೀಡುವ ನಿರೀಕ್ಷೆಯಿದೆ. ಜೊತೆಗೆ ಸ್ಮಾರ್ಟ್‌ಫೋನ್‌ DTS ಆಡಿಯೊ ಬೆಂಬಲದೊಂದಿಗೆ ಸ್ಟಿರಿಯೊ ಸ್ಪೀಕರ್ ಸೆಟಪ್‌ನೊಂದಿಗೆ ಬರುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ.

ಸದ್ಯದಲ್ಲೇ ಎಂಟ್ರಿ ನೀಡಲಿದೆ ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌!

ಟೆಕ್ನೋ ಸ್ಪಾರ್ಕ್‌ ಗೋ (2024) ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್‌ ಗೋ (2024) ಸ್ಮಾರ್ಟ್‌ಫೋನ್‌ 6,999ರೂ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇದು ಕಪ್ಪು, ನೀಲಿ, ಹಸಿರು ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಬರುವುದು ಪಕ್ಕಾ ಎಂದು ಹೇಳಲಾಗಿದೆ.

Best Mobiles in India

English summary
Tecno Spark Go (2024) Specifications Tipped Ahead of launch: Expected Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+