Tecno: ಟೆಕ್ನೋ ಸ್ಪಾರ್ಕ್ ಗೋ 2024 ಫೋನ್ ಅನಾವರಣ! ಡೈನಾಮಿಕ್ ಪೋರ್ಟ್ ವಿಶೇಷ!
ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ನೋ ಕಂಪೆನಿ ಹೆಸರುವಾಸಿಯಾಗಿದೆ. ಸ್ಟೈಲಿಶ್ ಲುಕ್ ಹಾಗೂ ಜಬರ್ದಸ್ತ್ ಫೀಚರ್ಸ್‌ಗಳಿಂದ ಟೆಕ್ನೋ ಫೋನ್‌ಗಳು ಸದ್ದು ಮಾಡುತ್ತಿವೆ. ಈಗಾಗಲೇ ಹಲವು ಆಯ್ಕೆಯ ಫೋನ್‌ಗಳಿಂದ ಟ್ರೆಂಡ್ ಸೆಟ್ ಮಾಡಿರುವ ಟೆಕ್ನೋ ಇದೀಗ ಹೊಸ ಟೆಕ್ನೋ ಸ್ಪಾರ್ಕ್ ಗೋ 2024 ಅನ್ನು ಅನಾವರಣಗೊಳಿಸಿದೆ.
ಹೌದು, ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಯುನಿಸೋಕ್ T606 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್-ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ ಸ್ಮಾರ್ಟ್‌ಫೋನ್ 5000mAh ಬ್ಯಾಟರಿಯನ್ನು ಹೊಂದಿದ್ದು, USB ಟೈಪ್-C ಚಾರ್ಜಿಂಗ್ ಪೋರ್ಟ್ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಟೆಕ್ನೋ ಸ್ಪಾರ್ಕ್ ಗೋ 2024 ಡಿಸ್‌ಪ್ಲೇ ರಚನೆ
ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 × 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಸೆಂಟರ್ಡ್ ಪಂಚ್ ಹೋಲ್ ನಾಚ್ ವಿನ್ಯಾಸದೊಂದಿಗೆ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಡೈನಾಮಿಕ್ ಪೋರ್ಟ್ ಅನ್ನು ಒಳಗೊಂಡಿದೆ.
ಟೆಕ್ನೋ ಸ್ಪಾರ್ಕ್ ಗೋ 2024 ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ ಯುನಿಸೋಕ್ T606 ಪ್ರೊಸೆಸರ್ ಹೊಂದಿದ್ದು, Mali G57 GPU ಸಪೊರ್ಟ್ ಪಡೆದಿದೆ. ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ)ಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ 4GB ವಿಸ್ತೃತ RAM ಅನ್ನು ಸಹ ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಟೆಕ್ನೋ ಸ್ಪಾರ್ಕ್ ಗೋ 2024 ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ನೊಂದಿಗೆ AI ಲೆನ್ಸ್ ಮತ್ತು LED ಫ್ಲ್ಯಾಷ್‌ನಿಂದ ಬೆಂಬಲಿತವಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದ್ದು, ಡ್ಯುಯಲ್-ಟೋನ್ LED ಫ್ಲ್ಯಾಷ್ ಅನ್ನು ಅವಲಂಬಿಸಿದೆ.
ಟೆಕ್ನೋ ಸ್ಪಾರ್ಕ್ ಗೋ 2024 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB ಟೈಪ್-C ಚಾರ್ಜಿಂಗ್ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್ ಗೋ 2024 ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ ಗೋ 2024 ಸ್ಮಾರ್ಟ್‌ಫೋನ್ ಪ್ರಸ್ತುತ ಮಲೇಷ್ಯಾದಲ್ಲಿ ಮಾತ್ರ ಅನಾವರಣಗೊಂಡಿದೆ. ಆದರೆ ಟೆಕ್ನೋ ಕಂಪೆನಿ ಇನ್ನು ಸಹ ಇದರ ಬೆಲೆ ವಿವರಗಳನ್ನು ಪ್ರಕಟಿಸಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ ಮಿಸ್ಟರಿ ವೈಟ್, ಆಲ್ಪೆಂಗ್ಲೋ ಗೋಲ್ಡ್, ಮ್ಯಾಜಿಕ್ ಸ್ಕಿನ್ ಮತ್ತು ಗ್ರಾವಿಟಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ. ಇದು ಭಾರತದಲ್ಲಿಯು ಕೂಡ ಸದ್ಯದಲ್ಲೇ ಬಿಡುಗಡೆ ಆಗುವ ಸೂಚನೆ ದೊರೆತಿದೆ.


Click it and Unblock the Notifications








