ಭಾರತಕ್ಕೆ ಎಂಟ್ರಿ ಕೊಟ್ಟ ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್! ಬೆಲೆ ಕೇವಲ 6,699ರೂ ಮಾತ್ರ?
ಸಾಕಷ್ಟು ದಿನದಿಂದ ಸದ್ದು ಮಾಡ್ತಿದ್ದ ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಟೆಕ್ನೋ ಸ್ಪಾರ್ಕ್ ಸರಣಿಗೆ ಹೊಸದಾಗಿ ಸೇರ್ಪಡೆ ಆಗಿದೆ. ಇನ್ನು ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ Go (2024) ಡಿಸ್‌ಪ್ಲೇ ರಚನೆ
ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಪಾಂಡ ಸ್ಕ್ರೀನ್ ಪ್ರೊಟೆಕ್ಷನ್ ಹೊಂದಿದೆ. ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಕಾರ್ಯನಿರ್ವಹಿಸುವ ಮತ್ತು ಅಧಿಸೂಚನೆಗಳನ್ನು ತೋರಿಸುವ ಡೈನಾಮಿಕ್ ಪೋರ್ಟ್ ಫೀಚರ್ಸ್ ಅನ್ನು ಒಳಗೊಂಡಿದೆ.
ಟೆಕ್ನೋ ಸ್ಪಾರ್ಕ್ Go (2024) ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 (Go Edition) ಆಧಾರಿತ HiOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಬಳಕೆದಾರರಿಗೆ ಬಳಕೆಯಾಗದ ಸಂಗ್ರಹಣೆಯನ್ನು ವರ್ಚುವಲ್ RAM ಆಗಿ ಬಳಸಿಕೊಳ್ಳಲು ಅನುಮತಿಸುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಸ್ಪಾರ್ಕ್ Go (2024) ಕ್ಯಾಮೆರಾ ಸೆಟ್‌ಅಪ್ ಏನಿದೆ?
ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಡ್ಯುಯಲ್ ಫ್ಲ್ಯಾಷ್ ಜೊತೆಗೆ AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಟೆಕ್ನೋ ಸ್ಪಾರ್ಕ್ Go (2024) ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಬಯೋಮೆಟ್ರಿಕ್ ಅನ್‌ಲಾಕಿಂಗ್‌ಗಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಇದು DTS ಸೌಂಡ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಪ್ಯಾಕ್ ಮಾಡುತ್ತದೆ.

ಟೆಕ್ನೋ ಸ್ಪಾರ್ಕ್ Go (2024) ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ Go (2024) ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 3GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 6,699ರೂ ಬೆಲೆಯನ್ನು ಹೊಂದಿದೆ. ಆದರೆ 8GB RAM + 64GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್ ಮಾದರಿಗಳ ಬೆಲೆಯನ್ನು ನಂತರ ಪ್ರಕಟಿಸಲಾಗುವುದು ಎಂದು ಟೆಕ್ನೋ ಕಂಪೆನಿ ದೃಢಪಡಿಸಿದೆ. ಇದು ಗ್ರಾವಿಟಿ ಬ್ಲಾಕ್ ಮತ್ತು ಮಿಸ್ಟರಿ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದನ್ನು ಅಮೆಜಾನ್ ಮತ್ತು ಇತರ ಪ್ರಮುಖ ರಿಟೇಲ್ ಮಳಿಗೆಗಳ ಮೂಲಕ ಡಿಸೆಂಬರ್ 7 ರಿಂದ ಮಾರಾಟವಾಗಲಿದೆ.


Click it and Unblock the Notifications








