ಭಾರತದಲ್ಲಿ ಟೆಕ್ನೋ ಸ್ಪಾರ್ಕ್ ಪವರ್ 2 ಏರ್ ಸ್ಮಾರ್ಟ್‌ಫೋನ್‌ ಲಾಂಚ್‌!

|

ಟೆಕ್ನೋ ಸಂಸ್ಥೆಯ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ಟೆಕ್ನೋ ಸ್ಪಾರ್ಕ್ ಪವರ್ 2 ಏರ್ ಭಾರತದಲ್ಲಿ ಬಿಡುಗಡೆ ಆಗಿದೆ. ಸಾಕಷ್ಟು ನಿರೀಕ್ಷೆಗಳು ಹಾಗೂ ಹೊಸ ಮಾದರಿಯ ವಿನ್ಯಾಸದೊಮದಿಗೆ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ. ಅಲ್ಲದೆ ಇದು ಇದೇ ಸೆಪ್ಟೆಂಬರ್ 20 ರಿಂದ ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ತನ್ನ ಬಹು ನಿರೀಕ್ಷಿತ ಟೆಕ್ನೋ ಸ್ಪಾರ್ಕ್‌ ಪವರ್‌ 2 ಏರ್‌ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ನ ಮೊದಲ ಸೇಲ್‌ ಇದೇ ಸೆಪ್ಟೆಂಬರ್ 20 ರಿಂದ ಫ್ಲಿಪ್ಕಾರ್ಟ್ ಮೂಲಕ ಮಧ್ಯಾಹ್ನ 12:00 ಗಂಟೆಗೆ ನಡೆಯಲಿದೆ. ಇದರ ಬೆಲೆ 8,499 ರೂ. ಆಗಿದ್ದು, ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೊನ್‌ ಒಳಗೊಂಡಿರುವ ವಿಶೇಷತೆಗಳೇನು, ಫೀಚರ್ಸ್‌ಗಳು ಯಾವುವು ಇದೆಲ್ಲವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಟೆಕ್ನೋ ಸ್ಪಾರ್ಕ್ ಪವರ್ 2 ಏರ್ ಸ್ಮಾರ್ಟ್‌ಫೋನ್‌ 720 x 1640 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 7 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 480 ನಿಟ್ಸ್ ಬ್ರೈಟ್‌ನೆಶ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ 83.71% ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ದಕ್ಷತೆ

ಪ್ರೊಸೆಸರ್ ದಕ್ಷತೆ

ಇದು ಮೀಡಿಯಾಟೆಕ್‌ನ ಹಿಲಿಯೊ A22 ಕ್ವಾಡ್-ಕೋರ್ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಟೆಕ್ನೋ ಸ್ಪಾರ್ಕ್‌ ಪವರ್ 2 ಏರ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಇದು ಸಿಂಗಲ್ ಚಾರ್ಜ್‌ನಲ್ಲಿ ಸ್ಮಾರ್ಟ್‌ಫೋನ್ ನಾಲ್ಕು ದಿನಗಳವರೆಗೆ ಇರುತ್ತದೆ ಎಂದು ಟೆಕ್ನೋ ಸಂಸ್ಥೆ ಹೇಳಿಕೊಂಡಿದೆ. ಜೊತೆಗೆ ಇದು 560 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ, 38 ಗಂಟೆಗಳ ಕಾಲ್‌ ಟೈಂ, ಇಂಟರ್‌ನೆಟ್‌ ಮತ್ತು 20 ಗಂಟೆಗಳ ವೈ-ಫೈ, 151 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್, 13 ಗಂಟೆಗಳ ಗೇಮ್ ಟೈಂ, ಮತ್ತು 15 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್‌ ಪವರ್ 2 ಏರ್‌ ಸ್ಮಾರ್ಟ್‌ಫೋನ್‌ ಬೆಲೆ 8,499 ರೂ. ಆಗಿದ್ದು, ಇದೇ ಸೆಪ್ಟೆಂಬರ್ 20 ರಿಂದ ಫ್ಲಿಪ್ಕಾರ್ಟ್ ಮೂಲಕ ಮಧ್ಯಾಹ್ನ 12:00 ಗಂಟೆಗೆ ಖರೀದಿಗೆ ಲಭ್ಯವಾಗಲಿದೆ.

Most Read Articles
Best Mobiles in India

English summary
The Tecno Spark Power 2 Air will be made available through Flipkart starting September 20.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X