Home
ಸುದ್ದಿಜಾಲ

'ಟೆಕ್ನೋ ಸ್ಪಾರ್ಕ್‌ ಪವರ್‌' ಸ್ಮಾರ್ಟ್‌ಫೋನ್ ಲಾಂಚ್!..6,000mAh ಬ್ಯಾಟರಿ!

ಟೆಕ್ನೋ ಕಂಪನಿಯು ಈಗಾಗಲೇ ಹಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದಲ್ಲಿ ನೆಲೆಯೂರಿದೆ. ಈ ಸಂಸ್ಥೆಯು ಇದೀಗ ದೇಶಿಯ ಮಾರುಕಟ್ಟೆಗೆ ಮತ್ತೊಂದು ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಲೈಫ್‌ ಸಾಮರ್ಥ್ಯವನ್ನು ಹೊಂದಿರುವ ಜೊತೆಗೆ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಸಹ ಒಳಗೊಂಡಿದೆ. ಬಜೆಟ್‌ ಬೆಲೆಯ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ.

ಟೆಕ್ನೋ ಕಂಪನಿ

ಹೌದು, ಟೆಕ್ನೋ ಕಂಪನಿಯು ಭಾರತೀಯ ಮೊಬೈಲ್ ಮಾರುಕಟ್ಟೆಗೆ ಹೊಸದಾಗಿ 'ಟೆಕ್ನೋ ಸ್ಪಾರ್ಕ್‌ ಪವರ್‌' ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬ್ಲೂ ಮತ್ತು ಗೋಲ್ಡ್‌ ಬಣ್ಣಗಳ ಆಯ್ಕೆಯನ್ನು ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಈ ಫೋನಿನ ಬೆಲೆಯು 8,499ರೂ.ಗಳಾಗಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ ಪವರ್‌ ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಟೆಕ್ನೋ ಸ್ಪಾರ್ಕ್‌ ಪವರ್‌ ಸ್ಮಾರ್ಟ್‌ಫೋನ್ 720×1548 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.35 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, 2.5D ಗ್ಲಾಸ್‌ ಅನ್ನು ಹೊಂದಿದೆ. ಡಿಸ್‌ಪ್ಲೇಯು 19:9 ಅನುಪಾತವನ್ನು ಪಡೆದಿದ್ದು, ವಿಡಿಯೊ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾದ ರಚನೆಯನ್ನು ಒಳಗೊಂಡಿದೆ. ಪ್ರಖರತೆಯು ಉತ್ತಮವಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಟೆಕ್ನೋ ಸ್ಪಾರ್ಕ್‌ ಪವರ್‌ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P22 ಆಕ್ಟಾ ಕೋರ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಅದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 9 ಓಎಸ್‌ ಸಹ ನೀಡಲಾಗಿದೆ. 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯನ್ನು ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯವಾಗಿ 256GB ವರೆಗೂ ವಿಸ್ತರಿಸಬಹುದಾದ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಹೇಗಿದೆ

ಕ್ಯಾಮೆರಾ ಹೇಗಿದೆ

ಟೆಕ್ನೋ ಸ್ಪಾರ್ಕ್‌ ಪವರ್‌ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಮೂರು ಕ್ಯಾಮೆರಾ ಸೆಟ್‌ಅಪ್‌ ಆಯ್ಕೆಗಳನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಹೊಂದಿದ್ದು, ಇನ್ನು ತೃತ್ತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಗುರುತಿಸಿಕೊಂಡಿದೆ. ಸೆಲ್ಫಿಗಾಗಿ ಸಹ 13ಎಂಪಿ ಕ್ಯಾಮೆರಾ ಸೆನ್ಸಾರ್ ನೀಡಲಾಗಿದೆ.

ಬ್ಯಾಟರಿ ಬಲವೇನು

ಬ್ಯಾಟರಿ ಬಲವೇನು

ಟೆಕ್ನೋ ಸ್ಪಾರ್ಕ್‌ ಪವರ್‌ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್‌ ಅಂದರೇ ಅದು ಬ್ಯಾಟರಿ ಆಗಿದೆ. ಈ ಫೋನ್ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಇದರೊಂದಿಗೆ 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಜೊತೆಗೆ ಬ್ಲೂಟೂತ್, ವೈಫೈ, ಕನೆಕ್ಟಿವಿಟಿಗೆ ಅಗತ್ಯ ಫೀಚರ್ಸ್‌ಗಳನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್‌ ಪವರ್‌ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇದರ ಬೆಲೆಯು 8,499ರೂ.ಗಳಾಗಿದ್ದು, ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯವಾಗಲಿದೆ. ಬ್ಲೂ ಮತ್ತು ಗೋಲ್ಡ್‌ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

Best Mobiles in India

English summary
The Tecno Spark Power will be available in Dawn Blue and Alphenglow Gold color options in India. It will be made available through Flipkart. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+