8000 ರೂ ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ಮಾರುಕಟ್ಟೆಯಲ್ಲಿ ವೈವಿಧ್ಯ ಬಗೆಯ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಇಂದು ಎಲ್ಲರ ಕೈನಲ್ಲೂ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುತ್ತಿದ್ದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆ ವಿಸ್ತಾರವಾಗುತ್ತಲೇ ಇದೆ. ಇನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ರೇಂಜ್‌ ಬಜೆಟ್‌ನ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿವೆ. ಸದ್ಯ ಬಜೆಟ್‌ ಬೆಲೆಯ ಗ್ರಾಹಕರಿಗಾಗಿಯೇ ಹಲವಾರು ಬ್ರ್ಯಾಂಡ್‌ ಕಂಪೆನಿಗಳು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿವೆ.

ಹೌದು

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರುತ್ತವೆ. ಇನ್ನು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಖರೀದಿ ಮಾಡುವವರಿಗೆ ಹಲವಾರು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೂ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಗ್ರಾಹಕರು ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಈ ಲೇಖನದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ 8,000 ರೂ ಒಳಗೆ ದೊರೆಯುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತೀವಿ ಓದಿ.

ರೆಡ್‌ಮಿ 8

ರೆಡ್‌ಮಿ 8

ರೆಡ್‌ಮಿ 8 ಸ್ಮಾರ್ಟ್‌ಫೋನ್‌ 6.22 ಇಂಚಿನ ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 439 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಎರಡನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಸಾಮರ್ಥ್ಯವನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಬೆಲೆ 7,999.ರೂ, ಆಗಿದೆ.

ರಿಯಲ್‌ಮಿ 3

ರಿಯಲ್‌ಮಿ 3

ಈ ಸ್ಮಾರ್ಟ್‌ಫೋನ್‌ 6.20 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಉತ್ತಮ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದೆ. ಇನ್ನು ಇದು ಮಿಡಿಯಾ ಟೆಕ್‌ ಹಿಲಿಯೋ P60 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೆ 4230mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, ಈ ಸ್ಮಾರ್ಟ್‌ಫೋನ್‌ ಬೆಲೆ 8,000. ರೂ, ಆಗಿದೆ.

ಇನ್‌ಫಿನಿಕ್ಸ್‌ S4

ಇನ್‌ಫಿನಿಕ್ಸ್‌ S4

ಇನ್‌ಫಿನಿಕ್ಸ್‌ S4 ಸ್ಮಾರ್ಟ್‌ಫೋನ್‌ 8,000 ರೂ ಒಳಗೆ ಲಭ್ಯವಾಗುವ ಕೆಲವೇ ಕೆಲವು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸ್ಮಾರ್ಟ್‌ಫೊನ್‌ಗಳಲ್ಲಿ ಒಂದಾಗಿದೆ. ಇದು 6.21 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್‌ ಹಿಲಿಯೋ P22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 9ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಇದು 3GB RAM ಮತ್ತು 32GB ಶೇಖರಣಾ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾವನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌, 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಅಲ್ಲದೆ 32ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದರ ಬೆಲೆ ಕೇವಲ 8,000 ರೂ ಆಗಿದೆ.

ಹಾನರ್‌ 10ಲೈಟ್‌

ಹಾನರ್‌ 10ಲೈಟ್‌

ಈ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.21 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್‌ ಕಿರಿನ್‌ 710 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 13ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 24 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಇರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 7,999 ರೂ ಆಗಿದೆ.

Best Mobiles in India

English summary
The sub-Rs. 8,000 segment has a few interesting models that are a step above entry-level.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X