Just In
Don't Miss
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಕರ್ಕ, ತುಲಾ, ಕುಂಭ ರಾಶಿಯ ಉದ್ಯೋಗಿಗಳಿಗೆ ಶುಭ ದಿನ
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಬಿಎಸ್ಎನ್ಎಲ್ನ ಈ ಮೂರು ಯೋಜನೆಗಳಲ್ಲಿ ಸಿಗುತ್ತೆ ಜಬರ್ದಸ್ತ್ ಡೇಟಾ!
ಬಿಎಸ್ಎನ್ಎಲ್ ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತ ಸಾಗಿದೆ. ಬಿಎಸ್ಎನ್ಎಲ್ ಟೆಲಿಕಾಂ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳ ಜೊತೆಗೆ ಅತ್ಯುತ್ತಮ ಡೇಟಾ ಪ್ರಯೋಜನಗಳ ಪ್ರಿಪೇಯ್ಡ್ ಪ್ಲ್ಯಾನ್ಗಳ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಕೆಲವೊಂದು ಪ್ಲ್ಯಾನ್ಗಳು ಅತ್ಯುತ್ತಮ ಡೇಟಾ ಮತ್ತು ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಆ ಪೈಕಿ ಬಿಎಸ್ಎನ್ಎಲ್ನ ಮೂರು ಟೆಲಿಕಾಂ ಯೋಜನೆಗಳು ಜಬರ್ದಸ್ತ್ ಡೇಟಾ ಸೌಲಭ್ಯದಿಂದ ಗಮನ ಸೆಳೆದಿವೆ.

ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಟೆಲಿಕಾಂ ಬಜೆಟ್ ದರದಲ್ಲಿ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್ಗಳನ್ನು ಹೊಂದಿದೆ. ಈ ಪ್ಲ್ಯಾನ್ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ಒಳಗೊಂಡಿವೆ. ಅದರಲ್ಲಿಯೂ ಕೆಲವು ಯೋಜನೆಗಳು ಹೆಚ್ಚು ಆಕರ್ಷಕ ಎನಿಸಿಕೊಂಡಿವೆ. ಹಾಗಾದರೆ ಜಬರ್ದಸ್ತ್ ಡೇಟಾ ಪ್ರಯೋಜನದ ಬಿಎಸ್ಎನ್ಎಲ್ ಟೆಲಿಕಾಂನ ಮೂರು ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿರಿ.
ಬಿಎಸ್ಎನ್ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್ಎನ್ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್ಎಮ್ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್ಎನ್ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.
ಬಿಎಸ್ಎನ್ಎಲ್ STV 447ರೂ. ಯೋಜನೆ ಪ್ರಯೋಜನಗಳು
ಬಿಎಸ್ಎನ್ಎಲ್ STV 447 ರೂ. ಯೋಜನೆ 100GB ಹೈ ಸ್ಪೀಡ್ ಡೇಟಾವನ್ನು ನೀಡುತ್ತದೆ. 100GB ಡೇಟಾದ ನಿಗದಿತ ಮಿತಿಯನ್ನು ಮೀರಿ, ಬಳಕೆದಾರರು 80 Kbps ವೇಗದಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು. ಯೋಜನೆಯು 60 ಕ್ಯಾಲೆಂಡರ್ ದಿನಗಳ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ ಮತ್ತು ಇದನ್ನು ವೆಬ್ಸೈಟ್ನಲ್ಲಿ 'ಡೇಟಾ ವೋಚರ್' ಅಡಿಯಲ್ಲಿ ನಮೂದಿಸಿದ್ದರೂ ಸಹ, ಇದು ದಿನಕ್ಕೆ 100 SMS ಜೊತೆಗೆ ಅನಿಯಮಿತ ಧ್ವನಿ ಕರೆಯನ್ನು ನೀಡುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086