ಜಿಯೋದ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ ಡೇಟಾ ಜೊತೆ ಬಿಗ್ ವ್ಯಾಲಿಡಿಟಿ!
ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಅತ್ಯುತ್ತಮ ಡೇಟಾ ಪ್ಲ್ಯಾನ್‌ಗಳಿಂದ ಗ್ರಾಹಕನ್ನು ಸೆಳೆದಿದೆ. ಜಿಯೋ ಇತ್ತೀಚಿಗೆ ಹಲವು ಹೊಸ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದ್ದು, ಅವುಗಳು ಅಧಿಕ ಡೇಟಾ, ವಾಯಿಸ್ ಕರೆ ಹಾಗೂ ಬಿಗ್ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಆದರೆ ಬಹುತೇಕ ಚಂದಾದಾರರು ಮೂರು ತಿಂಗಳ ವ್ಯಾಲಿಡಿಟಿ ಯೋಜನೆಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ.

ಹೌದು, ಜಿಯೋ ಸಂಸ್ಥೆಯು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಅಲ್ಪಾವಧಿಯ ಪ್ಲ್ಯಾನ್‌ಗಳಿದ್ದು, ಇನ್ನು ಕೆಲವು ದೀರ್ಘಾವಧಿಯ ಯೋಜನೆಗಳಾಗಿವೆ. ಇನ್ನೂ ಕೆಲ ಜಿಯೋ ಯೋಜನೆಗಳು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಈ ಪ್ಲ್ಯಾನ್‌ಗಳು ವಾಯಿಸ್ ಕರೆ, ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ. ಹಾಗಾದರೇ ಜಿಯೋ ಟೆಲಿಕಾಂನ 84 ದಿನಗಳ ವ್ಯಾಲಿಡಿಟಿಯ ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 555ರೂ. ಪ್ಲ್ಯಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಇನ್ನು ಇತರೆ ನೆಟವರ್ಕ್ 3000 ನಿಮಿಷಗಳ ವಾಯಿಸ್ ಕರೆಯ ಮಿತಿಯನ್ನು ಒಳಗೊಂಡಿದೆ.

ಜಿಯೋ 599ರೂ. ಪ್ಲ್ಯಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 999ರೂ.ಪ್ಲ್ಯಾನ್
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.


Click it and Unblock the Notifications








