Home
ಸುದ್ದಿಜಾಲ

ಬಜೆಟ್‌ ಬೆಲೆಗೆ ಅಧಿಕ ಡೇಟಾಗೆ ಏರ್‌ಟೆಲ್‌, ಜಿಯೋದ ಈ ಎರಡು ಪ್ಲ್ಯಾನ್‌ಗಳು ಬೆಸ್ಟ್‌!

ರಿಲಯನ್ಸ್‌ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ವಾಯಿಸ್‌ ಕರೆ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಹೊಂದಿವೆ. ಗ್ರಾಹಕರು ಸಹ ಬಜೆಟ್‌ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಬೆಸ್ಟ್‌ ವ್ಯಾಲಿಡಿಟಿ ಸೌಲಭ್ಯ ಪಡೆದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡುತ್ತಾರೆ.

ಬಜೆಟ್‌ ಬೆಲೆಗೆ ಅಧಿಕ ಡೇಟಾಗೆ ಏರ್‌ಟೆಲ್‌, ಜಿಯೋದ ಈ ಎರಡು ಪ್ಲ್ಯಾನ್‌ಗಳು ಬೆಸ್ಟ್‌

ಹೌದು, ಪ್ರತಿದಿನ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಪ್ರಯೋಜನದ ಪ್ರಿಪೇಯ್ಡ್‌ ಪ್ಲ್ಯಾನ್‌ ಗಳಿಗೆ ಬೇಡಿಕೆ ಹೆಚ್ಚು. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 1GB, 1.5GB , 2GB ಮತ್ತು 3GB ಡೇಟಾ ಪ್ರಯೋಜನಗಳ ಯೋಜನೆಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 1 GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 2 GB ಡೇಟಾ ಸಾಕು ಎನಿಸುತ್ತದೆ. ಹಾಗಾದರೇ ಜಿಯೋ, ಏರ್‌ಟೆಲ್ ಟೆಲಿಕಾಂಗಳ ದೈನಂದಿನ 2GB ಡೇಟಾ ಹಾಗೂ ಅತ್ಯುತ್ತಮ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಬಜೆಟ್‌ ಬೆಲೆಗೆ ಅಧಿಕ ಡೇಟಾಗೆ ಏರ್‌ಟೆಲ್‌, ಜಿಯೋದ ಈ ಎರಡು ಪ್ಲ್ಯಾನ್‌ಗಳು ಬೆಸ್ಟ್‌

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಬಜೆಟ್‌ ಬೆಲೆಗೆ ಅಧಿಕ ಡೇಟಾಗೆ ಏರ್‌ಟೆಲ್‌, ಜಿಯೋದ ಈ ಎರಡು ಪ್ಲ್ಯಾನ್‌ಗಳು ಬೆಸ್ಟ್‌

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

Best Mobiles in India

English summary
These Airtel and Jio Budget Plans Offers Daily Data With Best Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+