ಪ್ರತಿದಿನ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಬೇಕಿದ್ದರೇ ಈ ಪ್ಲ್ಯಾನ್‌ಗಳು ಉತ್ತಮ!
ರಿಲಾಯನ್ಸ್ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್-ಐಡಿಯಾ(Vi) ಟೆಲಿಕಾಂಗಳು ಹಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿವೆ. ಬಹುತೇಕ ಯೋಜನೆಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನಗಳ ಜೊತೆಗೆ ಬಿಗ್ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿರುವುದು ಹೈಲೈಟ್ ಆಗಿದೆ. ಆದರೆ ಮೊಬೈಲ್ ರೀಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರು ಮಾತ್ರ ಡೇಟಾ ಮತ್ತು ವ್ಯಾಲಿಡಿಟಿ ಎರಡು ಪ್ರಯೋಜನಗಳನ್ನು ನೋಡುತ್ತಾರೆ.

ಹೌದು, ಏರ್‌ಟೆಲ್, ಜಿಯೋ ಮತ್ತು Vi ಟೆಲಿಕಾಂಗಳು ಅಲ್ಪಾವಧಿ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಯೋಜನೆಗಳನ್ನು ಪರಿಚಯಿಸಿವೆ. ಸಂಸ್ಥೆಗಳ ವಾರ್ಷಿಕ ಯೋಜನೆಗಳು ಹೆಚ್ಚು ಗಮನ ಸೆಳೆದಿದ್ದು, ಆದರೆ ದೊಡ್ಡ ಮೊತ್ತದ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಗ್ರಾಹಕರಿಗೆ ಹೊರೆ ಅನಿಸಲಿದೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರು 84 ದಿನಗಳ ವ್ಯಾಲಿಡಿಟಿಯ ಸೌಲಭ್ಯದ ಯೋಜನೆಗಳನ್ನು ಆಯ್ದಕೊಳ್ಳುವುದು ಹೆಚ್ಚು. ಹಾಗಾದರೇ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ 84 ದಿನಗಳ ವ್ಯಾಲಿಡಿಟಿಗೆ ಬೆಸ್ಟ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್‌ನ 698ರೂ ಯೋಜನೆ
ಏರ್‌ಟೆಲ್‌ನ 698ರೂ ಪ್ರೀಪೇಡ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್ ಸೌಲಭ್ಯಗಳು ಸಿಗುತ್ತವೆ.

ಜಿಯೋ 599ರೂ.ಯೋಜನೆ
ಜಿಯೋ 599ರೂ. ಪ್ರೀಪೇಯ್ಡ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಜಿಯೋ ಆಪ್ಸ್‌ಗಳ ಸೇವೆಯು ದೊರೆಯಲಿದೆ.

ವೊಡಾಫೋನ್-ಐಡಿಯಾ (Vi ಟೆಲಿಕಾಂ) 699ರೂ. ಯೋಜನೆ
ವೊಡಾಫೋನ್-ಐಡಿಯಾದ 699ರೂ. ಯೋಜನೆ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಸದ್ಯ ಈ ಯೋಜನೆಯು ಡಬಲ್ ಡೇಟಾ ಕೊಡುಗೆ ಪಡೆದಿದ್ದು, ಡೈಲಿ 4GB ಡೇಟಾ ಸಿಗಲಿದೆ.


Click it and Unblock the Notifications








