ಅಧಿಕ ವ್ಯಾಲಿಡಿಟಿ ಬಯಸುವ ಏರ್‌ಟೆಲ್ ಗ್ರಾಹಕರಿಗೆ ಸದ್ಯ ಈ ಪ್ಲ್ಯಾನ್ ಉತ್ತಮ ಆಯ್ಕೆ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುತ್ತಾ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್‌ಟೆಲ್ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಏರ್‌ಟೆಲ್ ಟೆಲಿಕಾಂನ ಬಹುತೇಕ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಹಾಗೆಯೇ ಆಕರ್ಷಕ ವ್ಯಾಲಿಡಿಟಿ ಒಳಗೊಂಡಿವೆ. ಆದರೆ ಕಡಿಮೆ ಬೆಲೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಹೆಚ್ಚು ಚಂದಾದಾರರನ್ನು ಆಕರ್ಷಣೆ ಮಾಡಿವೆ.

ಹೌದು, ಏರ್‌ಟೆಲ್ ಟೆಲಿಕಾಂನ ಪ್ರೀಪೇಯ್ಡ್ ಯೋಜನೆಗಳ ಪಟ್ಟಿ ವಿಸ್ತಾರವಾಗಿದ್ದು, ಅವುಗಳಲ್ಲಿ ಅಲ್ಪಾವಧಿಯ ಪ್ಲ್ಯಾನ್‌ಗಳೊಂದಿಗೆ ದೀರ್ಘಾವಧಿಯ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಮುಖ್ಯವಾಗಿ ರೀಚಾರ್ಜ್ ಮಾಡಿಸುವ ಗ್ರಾಹಕರು ದೈನಂದಿನ ಡೇಟಾ ಜೊತೆಗೆ ಮೂರು ತಿಂಗಳ ವ್ಯಾಲಿಡಿಟಿಯ ಪ್ರಯೋಜನದ ಪ್ಲ್ಯಾನ್‌ಗಳತ್ತ ಮನಸ್ಸು ಮಾಡುತ್ತಾರೆ. ಈ ನಿಟ್ಟಿನಲ್ಲಿ ಏರ್‌ಟೆಲ್ 84 ದಿನಗಳ ವ್ಯಾಲಿಡಿಟಿಯ ಕೆಲವು ಅತ್ಯುತ್ತಮ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಒಳಗೊಂಡಿವೆ. ಏರ್‌ಟೆಲ್ ಟೆಲಿಕಾಂನ ಆ ಯೋಜನೆಗಳ ಬಗ್ಗೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 379ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಹೆಚ್ಚುವರಿಯಾಗಿ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ.

ಏರ್‌ಟೆಲ್ 598ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 598ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. ಹೆಚ್ಚುವರಿಯಾಗಿ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.
ಏರ್‌ಟೆಲ್‌ನ 698.ರೂ ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 698.ರೂ ಪ್ರೀಪೇಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಹಾಗೂ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ. ಜೊತೆಗೆ ಹೆಚ್ಚುವರಿಯಾಗಿ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

ಏರ್‌ಟೆಲ್‌ನ 456.ರೂ ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 456.ರೂ ಪ್ರೀಪೇಡ್ ಪ್ಲ್ಯಾನ್ ಒಟ್ಟು 60 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಒಟ್ಟು 50 GB ಡೇಟಾ ಪ್ರಯೋಜನ ದೊರೆಯಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ. ಜೊತೆಗೆ ಹೆಚ್ಚುವರಿಯಾಗಿ Wynk ಮ್ಯೂಸಿಕ್, ಫಾಸ್ಟ್‌ಟ್ಯಾಗ್‌ನಲ್ಲಿ 100ರೂ, ಕ್ಯಾಶ್‌ಬ್ಯಾಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.
ಏರ್‌ಟೆಲ್ 298ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.
ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂ 449ರೂ. ಪ್ರೀಪೇಯ್ಡ್ ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.


Click it and Unblock the Notifications








