ಏರ್‌ಟೆಲ್ ಸಿಮ್ ಬಳಕೆ ಮಾಡ್ತಿರಾ?..ಹಾಗಿದ್ರೆ, ಈ ಪ್ಲ್ಯಾನ್‌ಗಳು ನಿಮಗೆ ಬೆಸ್ಟ್!
ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್, ಚಂದಾದಾರರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಪ್ರಸ್ತುತ ಅದೇ ಹಾದಿಯಲ್ಲಿ ಮುನ್ನಡೆದಿರುವ ಭಾರ್ತಿ ಏರ್‌ಟೆಲ್ ಟೆಲಿಕಾಂ, ಮುಂಚೂಣಿಯಲ್ಲಿರುವ ಜಿಯೋ ಟೆಲಿಕಾಂಗೆ ನೇರ ಸ್ಪರ್ಧೆ ನೀಡುವ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಏರ್‌ಟೆಲ್ ಕಂಪನಿಯು ಕೆಲವು ಪ್ರಿಪೇಯ್ಡ್ ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿಯ ಪ್ರಯೋಜನ ಪಡೆದಿದೆ. ಆ ಪೈಕಿ ಕೆಲವು ಅಧಿಕ ದೈನಂದಿನ ಡೇಟಾ ಪ್ಲ್ಯಾನ್‌ಗಳನ್ನು ಪಡೆದಿವೆ.

ಪ್ರತಿದಿನ ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಏರ್‌ಟೆಲ್ ಕೆಲವು ಬೆಸ್ಟ್ ಯೋಜನೆಗಳ ಆಯ್ಕೆ ಲಭ್ಯ ಮಾಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. ಡೇಟಾ, ಕರೆ, ಎಸ್‌ಎಮ್‌ಎಸ್, ವ್ಯಾಲಿಡಿಟಿ ಪ್ರಯೋಜನಗಳೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ಸಹ ಹೊಂದಿವೆ. ಹಾಗಾದರೇ ಅಧಿಕ ದೈನಂದಿನ ಡೇಟಾಗಾಗಿ ರೀಚಾರ್ಜ್ ಮಾಡಲು ಏರ್‌ಟೆಲ್ ಬೆಸ್ಟ್ ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 549ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.
ಏರ್‌ಟೆಲ್ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.
ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.


Click it and Unblock the Notifications








