ನೀವು ಏರ್‌ಟೆಲ್‌ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನ್‌ಗಳಲ್ಲಿ ಒಂದನ್ನು ಆಯ್ದುಕೊಳ್ಳಿ!

|

ದೇಶದ ಟೆಲಿಕಾಂ ವಲಯದಲ್ಲಿ ಚಂದಾದಾರರ ಫೇವರೇಟ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಪ್ರಸ್ತುತ ಅದೇ ಹಾದಿಯಲ್ಲಿ ಮುನ್ನಡೆದಿರುವ ಭಾರ್ತಿ ಏರ್‌ಟೆಲ್‌ ಟೆಲಿಕಾಂ, ಮುಂಚೂಣಿಯಲ್ಲಿರುವ ಜಿಯೋ ಟೆಲಿಕಾಂಗೆ ನೇರ ಸ್ಪರ್ಧೆ ನೀಡುವ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಏರ್‌ಟೆಲ್‌ ಕಂಪನಿಯು ಕೆಲವು ಪ್ರಿಪೇಯ್ಡ್‌ ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿಯ ಪ್ರಯೋಜನ ಪಡೆದಿದೆ. ಆ ಪೈಕಿ ಕೆಲವು ಪ್ಲ್ಯಾನ್‌ಗಳು ಹೆಚ್ಚಿನ ದೈನಂದಿನ ಡೇಟಾ ಪ್ರಯೋಜನ ಪಡೆದಿವೆ.

ವಾಯಿಸ್

ಭಾರ್ತಿ ಏರ್‌ಟೆಲ್‌ ಟೆಲಿಕಾಂ ಕೆಲವು ಭಿನ್ನ ಪ್ರಯೋಜನಗಳ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಲಿಸ್ಟ್‌ ಹೊಂದಿದೆ. ಪ್ರತಿದಿನ ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಏರ್‌ಟೆಲ್‌ ಟೆಲಿಕಾಂ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ.

ವ್ಯಾಲಿಡಿಟಿ

ಡೇಟಾ, ಕರೆ, ಎಸ್‌ಎಮ್‌ಎಸ್‌, ವ್ಯಾಲಿಡಿಟಿ ಪ್ರಯೋಜನಗಳೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ಸಹ ಒಳಗೊಂಡಿವೆ. ಹಾಗಾದರೇ ಗ್ರಾಹಕಸ್ನೇಹಿ ಬೆಲೆಗೆ ಲಭ್ಯ ಇರುವ ಅತ್ಯುತ್ತಮ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನದ ಏರ್‌ಟೆಲ್‌ ಪ್ರೀಪೇಡ ಯೋಜನೆಗಳ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್‌ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
These Airtel Prepaid Plan Offers Best Data, Validity and SMS.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X