ಏರ್‌ಟೆಲ್‌ನ ಈ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಅಧಿಕ ವ್ಯಾಲಿಡಿಟಿ ಜೊತೆಗೆ ಡೇಟಾ!
ಭಾರತೀಯ ಟೆಲಿಕಾಂ ವಲಯದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್‌ಟೆಲ್ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಜಿಯೋ ಟೆಲಿಕಾಂಗೆ ಪೈಪೋಟಿ ನೀಡುವಂತಹ ಯೋಜನೆಗಳು ಇವೆ.

ಹೌದು, ಏರ್‌ಟೆಲ್ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು. ಹಾಗಾದರೇ 84 ದಿನಗಳ ವ್ಯಾಲಿಡಿಟಿಯ ಏರ್‌ಟೆಲ್ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್ 379ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ.

ಏರ್‌ಟೆಲ್ 598ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 598ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಸೌಲಭ್ಯಗಳು ಸಿಗುತ್ತವೆ.

ಏರ್‌ಟೆಲ್‌ನ 698ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 698ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಉಚಿತ ಹೆಲೊ ಟ್ಯೂನ್ ಸೌಲಭ್ಯಗಳು ಸಿಗುತ್ತವೆ.


Click it and Unblock the Notifications








