Home
ಸುದ್ದಿಜಾಲ

ಏರ್‌ಟೆಲ್‌ ಬಳಕೆದಾರರೇ ಈ ಪ್ಲ್ಯಾನ್‌ ರೀಚಾರ್ಜ್ ಮಾಡಿ ಐಪಿಎಲ್‌ ಮ್ಯಾಚ್ ನೋಡಿ!

ಐಪಿಎಲ್ 2021 ಸೀಸನ್ ಮ್ಯಾಚ್‌ಗಳು ಈಗಾಗಲೇ ಶುರುವಾಗಿದ್ದು, ಕ್ರಿಕೆಟ್‌ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಐಪಿಎಲ್ 2021 ಸೀಸನ್ ಮ್ಯಾಚ್‌ಗಳನ್ನು ಕೆಲವು ಕ್ರಿಕೆಟ್‌ ಪ್ರಿಯರು ಟಿವಿಯಲ್ಲಿ ವೀಕ್ಷಿಸಲು ಇಚ್ಛಿಸಿದರೇ, ಮತ್ತೆ ಕೆಲವು ಕ್ರಿಕೆಟ್‌ ಪ್ರಿಯರು ಮೊಬೈಲ್‌ನಲ್ಲಿಯೇ ಮ್ಯಾಚ್ ವೀಕ್ಷಿಸಬಯಸುತ್ತಾರೆ. ಮೊಬೈಲ್‌ನಲ್ಲಿ ಮ್ಯಾಚ್ ನೋಡಲು ಡಿಸ್ನಿ ಹಾಟ್‌ಸ್ಟಾರ್ ಆಪ್‌ ಬಳಕೆದಾರರಿಗೆ ನೆರವಾಗಲಿದೆ. ಈ ನಿಟ್ಟಿನಲ್ಲಿ ಏರ್‌ಟೆಲ್‌ ಕೆಲವು ಪ್ಲ್ಯಾನ್‌ಗಳಲ್ಲಿ ಹಾಟ್‌ಸ್ಟಾರ್ ಆಪ್ ಸೇವೆ ಒದಗಿಸಿದೆ.

ಏರ್‌ಟೆಲ್‌

ಹೌದು, ಜನಪ್ರಿಯ ಭಾರ್ತಿ ಏರ್‌ಟೆಲ್‌ ಟೆಲಿಕಾಂ ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ಭಿನ್ನ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಡೇಟಾ ಹಾಗೂ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸೌಲಭ್ಯ ಹೊಂದಿರುವ ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 448ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 448ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್‌ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್‌ಟೆಲ್‌ 401ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 401ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಏರ್‌ಟೆಲ್‌ 2698ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 2698ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 2698ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಮೊಬೈಲ್‌ನಲ್ಲಿ ಐಪಿಎಲ್‌ ಮ್ಯಾಚ್ ವೀಕ್ಷಣೆಗೆ ಈ ಯೋಜನೆಯು ಉಪಯುಕ್ತ ಅನಿಸಲಿದೆ.

ಏರ್‌ಟೆಲ್‌ 379ರೂ. ಪ್ಲ್ಯಾನ್‌

ಏರ್‌ಟೆಲ್‌ 379ರೂ. ಪ್ಲ್ಯಾನ್‌

ಏರ್‌ಟೆಲ್‌ನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ.

ಏರ್‌ಟೆಲ್‌ 598ರೂ.ಪ್ಲ್ಯಾನ್

ಏರ್‌ಟೆಲ್‌ 598ರೂ.ಪ್ಲ್ಯಾನ್

ಏರ್‌ಟೆಲ್‌ 598ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ.

ಏರ್‌ಟೆಲ್‌ನ 698ರೂ ಪ್ಲ್ಯಾನ್

ಏರ್‌ಟೆಲ್‌ನ 698ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ.

Best Mobiles in India

English summary
These Airtel Prepaid Plan Offers Disney+ Hotstar VIP Subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+