Home
ಸುದ್ದಿಜಾಲ

ಏರ್‌ಟೆಲ್‌ನ ಈ ಅಗ್ಗದ ಪ್ಲ್ಯಾನ್‌ನಲ್ಲಿ, ಅಧಿಕ ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ ಪಕ್ಕಾ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುತ್ತ ಮುನ್ನಡೆದಿರುವ ಏರ್‌ಟೆಲ್‌ ಸಂಸ್ಥೆಯು, ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇನ್ನೂ ಭಾರ್ತಿ ಏರ್‌ಟೆಲ್‌ ಟೆಲಿಕಾಂ ಹಲವು ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಕೆಲವು ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ಬಿಗ್ ವ್ಯಾಲಿಡಿಟಿಯ ಸೌಲಭ್ಯವನ್ನು ಹೊಂದಿವೆ. ಆದರೆ ಮತ್ತೆ ಕೆಲವು ಪ್ಲ್ಯಾನ್‌ಗಳು ದೈನಂದಿನ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯ ಹೊಂದಿವೆ.

ಭಾರ್ತಿ ಏರ್‌ಟೆಲ್ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಪ್ರಯೋಜನದ ಜೊತೆಗೆ ಬಿಗ್ ವ್ಯಾಲಿಡಿಟಿ ಸೌಲಭ್ಯ ಇರುವ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಈ ಯೋಜನೆಗಳಲ್ಲಿ ಅನಿಯಮಿತ ಧ್ವನಿ ಕರೆಗಳ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಸಹ ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌. ಅದರಲ್ಲಿಯೂ 56 ದಿನಗಳ ವ್ಯಾಲಿಡಿಟಿ ಪ್ರಯೋಜನದ ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ.

ಏರ್‌ಟೆಲ್‌ನ ಈ ಪ್ಲ್ಯಾನ್‌ನಲ್ಲಿ, ಅಧಿಕ ಡೇಟಾ ಜೊತೆ ಬಿಗ್ ವ್ಯಾಲಿಡಿಟಿ ಪಕ್ಕಾ!

ಹೌದು, ಏರ್‌ಟೆಲ್‌ ಟೆಲಿಕಾಂ ಸಂಸ್ಥೆಯು 56 ದಿನಗಳ ವ್ಯಾಲಿಡಿಟಿ ನೀಡುವ ಕೆಲವು ಪ್ರೀಪೇಯ್ಡ್‌ ಯೋಜನೆಗಳನ್ನು ಹೊಂದಿದೆ. ಈ ಯೋಜನೆಗಳು ವ್ಯಾಲಿಡಿಟಿ ಜೊತೆ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಹಾಗೂ ಇತರೆ ಹೆಚ್ಚುವರಿ ಸೌಲಭ್ಯ ಸಹ ಪಡೆದಿವೆ. ಹಾಗಾದರೇ 56 ದಿನಗಳ ವ್ಯಾಲಿಡಿಟಿ ಪಡೆದ ಏರ್‌ಟೆಲ್‌ ಪ್ರಮುಖ ಪ್ರೀಪೇಯ್ಡ್‌ ಯೋಜನೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್‌ 479ರೂ. ಪ್ರೀಪೇಯ್ಡ್‌ ಯೋಜನೆಯ ಪ್ರಯೋಜನಗಳ ಮಾಹಿತಿ : ಭಾರ್ತಿ ಏರ್‌ಟೆಲ್‌ ಸಂಸ್ಥೆಯ 479ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ದೈನಂದಿನ 1.5GB ಡೇಟಾ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳು ಲಭ್ಯವಾಗಲಿವೆ.

ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನಗಳು ಸಹ ಗ್ರಾಹಕರಿಗೆ ದೊರೆಯುತ್ತವೆ. ಹಾಗೆಯೇ ಜೊತೆಗೆ ಈ ಯೋಜನೆಯಲ್ಲಿ Wynk ಮ್ಯೂಸಿಕ್, ಹೆಲ್ಲೊ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಏರ್‌ಟೆಲ್‌ 5G ಡೇಟಾ ಪ್ರಯೋಜನ ಪಡೆದಿದೆ.

ಏರ್‌ಟೆಲ್‌ನ ಈ ಪ್ಲ್ಯಾನ್‌ನಲ್ಲಿ, ಅಧಿಕ ಡೇಟಾ ಜೊತೆ ಬಿಗ್ ವ್ಯಾಲಿಡಿಟಿ ಪಕ್ಕಾ!

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಯೋಜನೆಯ ಪ್ರಯೋಜನಗಳ ಮಾಹಿತಿ : ಭಾರ್ತಿ ಏರ್‌ಟೆಲ್‌ ಸಂಸ್ಥೆಯ 699ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳು ಲಭ್ಯವಾಗಲಿವೆ.

ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನಗಳು ಸಹ ಗ್ರಾಹಕರಿಗೆ ದೊರೆಯುತ್ತವೆ. ಇದರೊಂದಿಗೆ ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಪ್ರಯೋಜನ, ಅಲ್ಲದೇ Wynk ಮ್ಯೂಸಿಕ್, ಹೆಲ್ಲೊ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಏರ್‌ಟೆಲ್‌ 5G ಡೇಟಾ ಪ್ರಯೋಜನ ಪಡೆದಿದೆ.

ಏರ್‌ಟೆಲ್‌ 549ರೂ. ಪ್ರೀಪೇಯ್ಡ್‌ ಯೋಜನೆಯ ಪ್ರಯೋಜನಗಳ ಮಾಹಿತಿ : ಭಾರ್ತಿ ಏರ್‌ಟೆಲ್‌ ಸಂಸ್ಥೆಯ 549ರೂ. ಪ್ರಿಪೇಯ್ಡ್ ಪ್ಲ್ಯಾನ್‌ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಸೌಲಭ್ಯ ಮತ್ತು ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳು ಸಿಗಲಿದೆ.

ಹಾಗೆಯೇ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ. ಇದರೊಂದಿಗೆ ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಪ್ರಯೋಜನ, ಅಲ್ಲದೇ ವೆಂಕ್ ಮ್ಯೂಸಿಕ್, ಹೆಲ್ಲೊ ಟ್ಯೂನ್‌, ಏರ್‌ಟೆಲ್‌ 5G ಡೇಟಾ ಪ್ರಯೋಜನ ಸಹ ಪಡೆದಿದೆ.

Best Mobiles in India

English summary
These Airtel Prepaid Plans offer 56 days validity. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+