ಏರ್‌ಟೆಲ್ ಗ್ರಾಹಕರೇ, ಅವಸರವಾಗಿ ರೀಚಾರ್ಜ್ ಮಾಡಬೇಡಿ, ಈ ಪ್ಲ್ಯಾನ್ ಗಮನಿಸಿ!
ಪ್ರಿಯ ಏರ್‌ಟೆಲ್ ಗ್ರಾಹಕರೇ, ನಿಮಗೆ ಅಧಿಕ ಡೇಟಾ ಅಗತ್ಯವೇ? ನಿಮಗೆ ದೀರ್ಘ ವ್ಯಾಲಿಡಿಟಿ ಪ್ರಯೋಜನ ಬೇಕೆ? ಪ್ರತಿದಿನ ಎಸ್‌ಎಮ್‌ಎಸ್ ಪ್ರಯೋಜನ ಇದ್ದರೆ ಅನುಕೂಲವೇ? ಹಾಗೆಯೇ ಓಟಿಟಿ ಚಂದಾದಾರಿಕೆ ಆಯ್ಕೆ ಇರಬೇಕೆ? ಬಹುತೇಕ ಎಲ್ಲ ಚಂದಾದಾರರು ಈ ರೀತಿಯ ಸೌಲಭ್ಯಗಳನ್ನು ಬಯಸುತ್ತಾರೆ. ಇದಕ್ಕೆ ಪೂರಕವೆಂಬಂತೆ ಟೆಲಿಕಾಂ ಸಂಸ್ಥೆಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿ ಮುನ್ನಡೆದಿವೆ. ಅದಾಗ್ಯೂ, ಭಾರ್ತಿ ಏರ್‌ಟೆಲ್ ಟೆಲಿಕಾಂ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಿಯರ ಗಮನ ಸೆಳೆದಿದೆ.

ಹೌದು, ಭಾರ್ತಿ ಏರ್‌ಟೆಲ್ ದೇಶದ ಎರಡನೇ ದೊಡ್ಡ ಟೆಲಿಕಾಂ ಆಪರೇಟ ಸಂಸ್ಥೆಯಾಗಿ ಗುರುತಿಸಿಕೊಂಡಿದ್ದು, ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುತ್ತ ಸಾಗಿದೆ. ಏರ್‌ಟೆಲ್‌ನ ಹಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಒಳಗೊಂಡಿವೆ. ಅವುಗಳಲ್ಲಿ ಕೆಲವು ಪ್ರೀಪೇಯ್ಡ್ ಪ್ಲ್ಯಾನ್ ಅಧಿಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಆಯ್ಕೆ ಮೂಲಕ ಹೆಚ್ಚಿನ ಗಮನ ಸೆಳೆದಿವೆ.
ಏರ್‌ಟೆಲ್‌ನ ಕೆಲವು ಯೋಜನೆಗಳು ಡೇಟಾ, ವ್ಯಾಲಿಡಿಟಿ, ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿಯಾಗಿ ಡಿಸ್ನಿಪ್ಲಸ್ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ಪಡೆದಿವೆ. ಹೀಗಾಗಿ ಏರ್‌ಟೆಲ್ ಗ್ರಾಹಕರು ಮೊಬೈಲ್ ರೀಚಾರ್ಜ್ ಮಾಡುವಾಗ ಇಂತಹ ಪ್ರೀಪೇಯ್ಡ್ ಪ್ಲ್ಯಾನ್‌ಗಳತ್ತ ಒಮ್ಮೆ ಕಣ್ಣಿಸಿಯುವುದು ಸೂಕ್ತ. ಹಾಗಾದರೆ ಅಧಿಕ ಡೇಟಾ, ದೀರ್ಘ ವ್ಯಾಲಿಡಿಟಿ ಹಾಗೂ ಡಿಸ್ನಿಪ್ಲಸ್ ಹಾಟ್‌ಸ್ಟಾರ್ ಪ್ರಯೋಜನ ಪಡೆದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್‌ನ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2.5 GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿಪ್ಲಸ್ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆ, ಅಮೆಜಾನ್ ಪ್ರೈಮ್‌ನ ಚಂದಾದಾರಿಕೆ ಸಿಗಲಿದ್ದು, ಏರ್‌ಟೆಲ್‌ನ Wynk Music ಸೇವೆ ಸಹ ದೊರೆಯುತ್ತದೆ. ಇದರೊಂದಿಗೆ ಹೆಲೊಟೂನ್ಸ್ ಮತ್ತು 100 ರೂ. ಫಾಸ್ಟ್‌ಟ್ಯಾಗ್ ಕ್ಯಾಶ್-ಬ್ಯಾಕ್ ಸಹ ಸಿಗಲಿದೆ.

ಏರ್‌ಟೆಲ್‌ನ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 839ರೂ. ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.
ಏರ್‌ಟೆಲ್‌ನ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ನೂತನ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ, ಏರ್‌ಟೆಲ್ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ, ಏರ್‌ಟೆಲ್ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.


Click it and Unblock the Notifications








