Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಪಕ್ಕಾ ಸಿಗುತ್ತೆ!

ದೇಶದ ಟೆಲಿಕಾಂ ಸಂಸ್ಥೆಗಳು ಗ್ರಾಹಕರನ್ನು ಸೆಳೆಯಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಈ ನಿಟ್ಟಿನಲ್ಲಿ ದೇಶದ ಎರಡನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ಏರ್‌ಟೆಲ್‌ ಸಹ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಮೂಲಕ ಅಧಿಕ ಗ್ರಾಹಕ ಬಳಗ ಹೊಂದಿದೆ. ಕೆಲವು ಪ್ಲ್ಯಾನ್‌ಗಳಲ್ಲಿ ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಲಭ್ಯ.

ಹೌದು, ಏರ್‌ಟೆಲ್‌ ಟೆಲಿಕಾಂನ ಭಿನ್ನ ಯೋಜನೆಗಳ ಲಿಸ್ಟ್‌ ಹೊಂದಿದ್ದು,ಆ ಪೈಕಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು 100ರೂ. ಫಾಸ್ಟ್ಯಾಗ್‌ (FASTag) ಕ್ಯಾಶ್‌ಬ್ಯಾಕ್‌ ಸಿಗಲಿದೆ. ಇದರೊಂದಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ, ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಪಡೆದಿವೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸಿಗುತ್ತೆ!

ಏರ್‌ಟೆಲ್‌ ಟೆಲಿಕಾಂನ ಕೆಲವು ಅಗ್ಗದ ಯೋಜನೆಗಳಲ್ಲಿಯೂ ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಕೆಲವು ದುಬಾರಿ ಯೋಜನೆಗಳು ಸಹ ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಪ್ರಯೋಜನ ಒಳಗೊಂಡು ಗ್ರಾಹಕರನ್ನು ಸೆಳೆದಿವೆ. ಹಾಗಾದರೆ ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸೌಲಭ್ಯ ಪಡೆದ ಏರ್‌ಟೆಲ್‌ನ ಕೆಲವು ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸಿಗುತ್ತೆ!

ಏರ್‌ಟೆಲ್‌ನ 519ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ನೂತನ 519ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 60 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 135 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ 100ರೂ. ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ದೊರೆಯುತ್ತದೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸಿಗುತ್ತೆ!

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, 100ರೂ. ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸಿಗುತ್ತೆ!

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, 100ರೂ. ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಫಾಸ್ಟ್ಯಾಗ್‌ ಕ್ಯಾಶ್‌ಬ್ಯಾಕ್‌ ಸಿಗುತ್ತೆ!

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, 100ರೂ. ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

Best Mobiles in India

English summary
Few Airtel Prepaid Plans offer Rs 100 FASTag Cashback; know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+