ನೀವು ಏರ್‌ಟೆಲ್ ಗ್ರಾಹಕರೇ?..ವಾರ್ಷಿಕ ವ್ಯಾಲಿಡಿಟಿ ಬೇಕೆ?..ಹಾಗಿದ್ರೆ ಈ ಪ್ಲ್ಯಾನ್ ಬೆಸ್ಟ್!
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋಗೆ ಪ್ರಬಲ ಪೈಪೋಟಿ ನೀಡುತ್ತಿರುವ ಟೆಲಿಕಾಂ ಆಗಿ ಏರ್‌ಟೆಲ್ ಕಾಣಿಸಿಕೊಂಡಿದೆ. ಏರ್‌ಟೆಲ್ ಅಲ್ಪಾವಧಿಯ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿಯ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಸಂಸ್ಥೆಯ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನಗಳನ್ನು ಪಡೆದಿವೆ.
ಹೌದು, ಏರ್‌ಟೆಲ್ ಟೆಲಿಕಾಂನ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ದೀರ್ಘಾವಧಿ ವ್ಯಾಲಿಡಿಟಿಯಲ್ಲಿ ಹೆಚ್ಚು ಗಮನ ಸೆಳೆದಿವೆ. ಏರ್‌ಟೆಲ್‌ನ ಕೆಲವು ಪ್ಲ್ಯಾನ್‌ಗಳು 365 ದಿನಗಳ ವ್ಯಾಲಿಡಿಟಿ ಹೊಂದಿದ್ದರೂ ಇತರೆ ಪ್ರಯೋಜನಗಳಲ್ಲಿ ಹಾಗೂ ಬೆಲೆಯಲ್ಲಿ ಭಿನ್ನತೆ ಪಡೆದಿವೆ. ಗ್ರಾಹಕರಿಗೆ ಅಗತ್ಯಕ್ಕೆ ಅನುಗುಣವಾಗಿ ರೀಚಾರ್ಜ್‌ಗೆ ಅನುಕೂಲಕರವಾಗಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 1498ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 1498ರೂ. ಪ್ರೀಪೇಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ ಆಪ್ ಸೇವೆ ಲಭ್ಯ.

ಏರ್‌ಟೆಲ್ 2498ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 2498ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ Xstream ಆಪ್ ಸೇವೆ ಲಭ್ಯ.

ಏರ್‌ಟೆಲ್ 2698ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 2698ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ವಿಐಪಿ ಸದಸ್ಯತ್ವ, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ Xstream ಆಪ್ ಸೇವೆ ಲಭ್ಯ.


Click it and Unblock the Notifications








