ಏರ್‌ಟೆಲ್ ಗ್ರಾಹಕರೇ ಡೈಲಿ 2GB ಡೇಟಾಗೆ ಇವೇ ಉತ್ತಮ ಪ್ಲ್ಯಾನ್ಸ್!
ದೇಶದ ಟೆಲಿಕಾಂ ವಲಯದಲ್ಲಿ ಏರ್‌ಟೆಲ್ ಸಂಸ್ಥೆಯು ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುತ್ತಾ ಮುನ್ನುಗುತ್ತಿದೆ. ಏರ್‌ಟೆಲ್ ಟೆಲಿಕಾಂ ಈಗಾಗಲೇ ಹಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಡೈಲಿ ಅಧಿಕ ಡೇಟಾ, ಧೀರ್ಘ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್‌ನಂತಹ ಸೌಲಭ್ಯಗಳನ್ನು ಹೊಂದಿರುವ ಬಜೆಟ್ ದರದ ಯೋಜನೆಗಳು ಹೆಚ್ಚು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿವೆ.

ಹೌದು, ಏರ್‌ಟೆಲ್ ಟೆಲಿಕಾಂ ಪ್ರತಿದಿನ 2GB ಡೇಟಾ ಪ್ರಯೋಜನದ ಆಕರ್ಷಕ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ಎಸ್‌ಎಮ್‌ಎಸ್ ಪ್ರಯೋಜನ, ಉಚಿತ ವಾಯಿಸ್ ಕರೆಗಳ ಸೌಲಭ್ಯ ಇದರೊಂದಿಗೆ ಬಿಗ್ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ. ಹೀಗಾಗಿ ಬಹುತೇಕ ಏರ್‌ಟೆಲ್ ಗ್ರಾಹಕರು ಪ್ರತಿದಿನ 2GB ಡೇಟಾ ಯೋಜನೆ ಹೊಂದಿರುವ ಪ್ರೀಪೇಯ್ಡ್ ಯೋಜನೆ ರೀಚಾರ್ಜ್ ಮಾಡಲು ಮುಂದಾಗುತ್ತಾರೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 698ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನವಿದೆ.

ಏರ್‌ಟೆಲ್ 349ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದ್ದು, ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಪಡೆದಿದೆ ಮತ್ತು ಪ್ರತಿದಿನ 100 ಎಸ್‌ಎಂಎಸ್ ಜೊತೆ ಅಮೆಜಾನ್ ಪ್ರೈಮ್ ವೀಡಿಯೊದ ವರ್ಷಪೂರ್ತಿ ಚಂದಾದಾರಿಕೆ ಲಭ್ಯ.

ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ ಪ್ರೀಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದೆ.

ಏರ್‌ಟೆಲ್ 2498ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ ಪ್ರೀಪೇಯ್ಡ್ ಯೋಜನೆಯು 2GB ದೈನಂದಿನ ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೂ 365 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ / ದಿನ ಪ್ರಯೋಜನವಿದೆ.


Click it and Unblock the Notifications








