Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರೇ ಈ ಪ್ಲ್ಯಾನಿನಲ್ಲಿ ದಿನವೂ 3GB ಡೇಟಾ ಪಕ್ಕಾ!..ಬೆಲೆಯೂ ಅಗ್ಗ!

ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್‌ ಟೆಲಿಕಾಂ, ಜಿಯೋ ಟೆಲಿಕಾಂಗೆ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಏರ್‌ಟೆಲ್‌ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಪಡೆದಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ ಎರಡು ಪ್ಲ್ಯಾನ್‌ಗಳು ಭಾರೀ ಗಮನ ಸೆಳೆದಿದೆ.

ಶ್ರೇಣಿಯ

ಹೌದು, ಏರ್‌ಟೆಲ್‌ ಟೆಲಿಕಾಂ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಏರ್‌ಟೆಲ್‌ 558ರೂ. ಮತ್ತು ಏರ್‌ಟೆಲ್‌ 398ರೂ. ಯೋಜನೆಗಳು ಆಕರ್ಷಕ ಎನಿಸಿವೆ. ಈ ಎರಡು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 558ರೂ. ಮತ್ತು 398ರೂ. ಯೋಜನೆಗಳನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಪ್ರಯೋಜನಗಳು. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 219ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 219ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ನ 219ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವೆಂಕ್ ಮ್ಯೂಸಿಕ್ ಹಾಗೂ ಹೆಲೊ ಟ್ಯೂನ್ ಸೇವೆ ಲಭ್ಯ.

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್ ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು:

ಏರ್‌ಟೆಲ್ ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು:

ಏರ್‌ಟೆಲ್‌ ಟೆಲಿಕಾಂನಲ್ಲಿ 2,498ರೂ. 2698ರೂ ಮತ್ತು 1,498ರೂ. ಯೋಜನೆಗಳು ದೀರ್ಘಾವಧಿಯ ಪ್ಲ್ಯಾನ್‌ಗಳಲ್ಲಿ ಹೆಚ್ಚು ಗಮನ ಸೆಳೆದಿವೆ. ಏರ್‌ಟೆಲ್ 2,498ರೂ. ಯೋಜನೆಯು 365 ದಿನಗಳ ಮಾನ್ಯತೆ ಹೊಂದಿದ್ದು, 2GB ದೈನಂದಿನ ಡೇಟಾವನ್ನು ಪಡೆದಿದೆ. ಹಾಗೆಯೇ 1,498ರೂ.ಗಳ ಯೋಜನೆಯು 365 ದಿನಗಳ ಮಾನ್ಯತೆಯೊಂದಿಗೆ ಒಟ್ಟು 24GB ಡೇಟಾವನ್ನು ಹೊಂದಿದೆ. ಈ ಎರಡೂ ಯೋಜನೆಗಳು ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ / ದಿನ ಲಾಭದೊಂದಿಗೆ ಬರುತ್ತವೆ. ಇನ್ನು 2698ರೂ. ಯೋಜನೆಯು ಸಹ 365 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಪ್ರತಿದಿನ 2GB ಡೇಟಾ ಪ್ರಯೋಜನ ಜೊತೆಗೆ ಡಿಸ್ನಿ ಹಾಟ್‌ಸ್ಟಾರ್‌ ಆಪ್‌ ಸೇವೆ ಲಭ್ಯ.

Best Mobiles in India

English summary
These Airtel Prepaid Plans Offers Daily 3GB Data With Attractive Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+