Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರೇ ಸದ್ಯ ಕಡಿಮೆ ಬೆಲೆಗೆ ಇವೇ ಬೆಸ್ಟ್‌ ಪ್ರೀಪೇಯ್ಡ್‌ ಪ್ಲ್ಯಾನ್‌!

ಭಾರತೀಯ ಟೆಲಿಕಾಂ ವಲಯದಲ್ಲಿ ಜನಪ್ರಿಯ ಏರ್‌ಟೆಲ್‌ ಟೆಲಿಕಾಂ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂಗೆ ನೇರ ಫೈಟ್‌ ನೀಡುತ್ತ ಮುನ್ನಡೆದಿದೆ. ಏರ್‌ಟೆಲ್‌ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಇನ್ನು ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು, ಕಡಿಮೆ ಬೆಲೆಯ ಟ್ಯಾಗ್ ಸಹ ಪಡೆದಿವೆ.

ಪ್ರೀಪೇಯ್ಡ್‌

ಹೌದು, ಏರ್‌ಟೆಲ್ ಟೆಲಿಕಾಂ ದೈನಂದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಇರುವ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಯೋಜನೆಗಳಲ್ಲಿ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಕೆಲವು ಅಲ್ಪಾವಧಿಯ ವ್ಯಾಲಿಡಿಟಿ ಪಡೆದಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಒಳಗೊಂಡಿವೆ. ಆದರೆ ಏರ್‌ಟೆಲ್‌ನ ಈ ಯೋಜನೆಗಳು ಬಜೆಟ್‌ ಪ್ರೈಸ್‌ನಲ್ಲಿರುವುದು ಗ್ರಾಹಕರನ್ನು ಸೆಳೆದಿವೆ. ಹಾಗಾದರೇ ಗ್ರಾಹಕ ಸ್ನೇಹಿ ದರದಲ್ಲಿ ಅತ್ಯುತ್ತಮ ಪ್ರಯೋಜನ ಪಡೆದ ಏರ್‌ಟೆಲ್‌ನ ಕೆಲವು ಯೋನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್ 298ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್ 298ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 298ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಈ ಪ್ಲ್ಯಾನ್ ಹೆಚ್ಚುವರಿಯಾಗಿ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ 399ರೂ. ಪ್ರಿಪೇಯ್ಡ್‌ ಯೋಜನೆ

ಏರ್‌ಟೆಲ್‌ 399ರೂ. ಪ್ರಿಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಸೇವೆಯನ್ನು ಪಡೆಯಬಹುದು.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ದಿನಕ್ಕೆ 100 ಎಸ್‌ಎಂಎಸ್ ಸೌಲಭ್ಯ ಮತ್ತು ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಹೊಂದಿದೆ. ಹಾಗೆಯೇ ಪ್ರತಿದಿನ 2GB ಡೇಟಾವನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಹೆಲೋ ಟ್ಯೂನ್, ವೆಂಕ್ ಮ್ಯೂಸಿಕ್ ಸೇವೆಗಳ ಪ್ರಯೋಜನ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 598ರೂ. ಪ್ರಿಪೇಯ್ಡ್‌ ಯೋಜನೆ

ಏರ್‌ಟೆಲ್‌ 598ರೂ. ಪ್ರಿಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 598ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್‌ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

Best Mobiles in India

English summary
These Airtel Prepaid Plans Offers Daily Data And Best Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+