ಜಿಯೋ, ಏರ್‌ಟೆಲ್, ವೊಡಾಫೋನ್: ಪ್ರತಿದಿನ 1.5GB ಡೇಟಾದ ಪ್ಲ್ಯಾನ್‌ಗಳು ಇಲ್ಲಿವೆ!
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್ ಜಾರಿ ಮಾಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಗ್ರಾಹಕರಿಗೆ ಮೊಬೈಲ್ ರೀಚಾರ್ಜ್ ಮಾಡಿಸಿಕೊಳ್ಳಲು ಹಲವು ಸುಲಭ ವಿಧಾನಗಳನ್ನು ಟೆಲಿಕಾಂ ಸಂಸ್ಥೆಗಳು ಪರಿಚಯಿಸಿವೆ. ಹಾಗೆಯೇ ಈ ವೇಳೆ ಎಲ್ಲರೂ ಮನೆಯಲ್ಲಿರುವುದರಿಂದ ಇಂಟರ್ನೆಟ್ ಬಳಕೆ ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ಕಡಿಮೆ ಬೆಲೆಗೆ ಪ್ರತಿದಿನ ಅಧಿಕ ಡೇಟಾ ನೀಡುವ ಪ್ಲ್ಯಾನ್‌ಗಳು ಆಕರ್ಷಕ ಅನಿಸಿವೆ.

ಹೌದು, ದೇಶದಲ್ಲಿ ಲಾಕ್‌ಡೌನ್ ವ್ಯವಸ್ಥೆ ಜಾರಿಯಲ್ಲಿದೆ. ಈ ನಿಟ್ಟಿನಲ್ಲಿ ಮನೆಯಿಂದಲೇ ಕೆಲಸ ಮಾಡುವವರಿಗೆ ಇಂಟರ್ನೆಟ್ ಅಗತ್ಯವಿದೆ ಹಾಗೂ ವಿಡಿಯೊ ಸ್ಟ್ರೀಮಿಂಗ್ ತಾಣಗಳ ಬಳಕೆಗೆ ಇಂಟರ್ನೆಟ್ ಅನಿವಾರ್ಯವಾಗಿದೆ. ಹೀಗಾಗಿ ಬಳಕೆದಾರರಿಗೆ ಸದ್ಯ ಹೆಚ್ಚಿನ ಡೇಟಾ ಅಗತ್ಯವಿದೆ. ಬಹುತೇಕರು ಪ್ರತಿದಿನ 2GB ಡೇಟಾ ಯೋಜನೆಗಳ ಮೋರೆ ಹೋಗಿದ್ದಾರೆ. ಮತ್ತೆ ಕೆಲವರಿಗೆ ಕಡಿಮೆ ಬೆಲೆಗೆ ಪ್ರತಿದಿನ 1.5GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬೆಸ್ಟ್ ಅನಿಸಿವೆ. ಹೀಗಾಗಿ ಈ ಲೇಖನದಲ್ಲಿ ಪ್ರತಿದಿನ 1.5GB ಡೇಟಾ ಒದಗಿಸುವ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಪ್ಲ್ಯಾನ್‌ಗಳ ಬಗ್ಗೆ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 199ರೂ.ಪ್ಲ್ಯಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಜಿಯೋ 399ರೂ. ಪ್ಲ್ಯಾನ್
ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಇತರೆ ನೆಟವರ್ಕ ಕರೆಗಳಿಗೆ 2000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 555ರೂ. ಪ್ಲ್ಯಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.5GB ಡೇಟಾ ಪ್ರಯೋಜನವನ್ನು ಹೊಂದಿದ್ದು, ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ.

ವೊಡಾಫೋನ್ 249ರೂ.ಪ್ಲ್ಯಾನ್
ವೊಡಾಫೋನಿನ 249ರೂ.ಪ್ಲ್ಯಾನ್ ಸಹ 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ವೊಡಾಫೋನ್ ಇತ್ತೀಚಿಗೆ ಡಬಲ್ ಡೇಟಾ ಕೊಡುಗೆ ನೀಡಿದ್ದು, ಹೀಗಾಗಿ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.

ವೊಡಾಫೋನ್ 399ರೂ.ಪ್ಲ್ಯಾನ್
ವೊಡಾಫೋನಿನ 399ರೂ.ಪ್ಲ್ಯಾನ್ ಸಹ 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ವೊಡಾಫೋನ್ ಇತ್ತೀಚಿಗೆ ಡಬಲ್ ಡೇಟಾ ಕೊಡುಗೆ ನೀಡಿದ್ದು, ಇದರೊಂದಿಗೆ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.

ವೊಡಾಫೋನ್ 599ರೂ.ಪ್ಲ್ಯಾನ್
ವೊಡಾಫೋನಿನ 599ರೂ.ಪ್ಲ್ಯಾನ್ ಸಹ 84 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ವೊಡಾಫೋನ್ ಇತ್ತೀಚಿಗೆ ಡಬಲ್ ಡೇಟಾ ಕೊಡುಗೆ ನೀಡಿದ್ದು, ಹೀಗಾಗಿ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.

ಏರ್‌ಟೆಲ್ 249ರೂ.ಪ್ಲ್ಯಾನ್
ಏರ್‌ಟೆಲ್ 249ರೂ.ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ರೋಮಿಂಗ್ ಕರೆಗಳು ಸೇರಿದಂತೆ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಪ್ರತಿದಿನ 1.5GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದೇ ಪ್ರಯೋಜನಗಳನ್ನು ಒಳಗೊಂಡ ಏರ್‌ಟೆಲ್ 279ರೂ. ಪ್ಲ್ಯಾನ್ ರೀಚಾರ್ಜ್ ಮಾಡಿಸಿದರೇ 4ಲಕ್ಷದ ಇನ್ಶೂರೆನ್ಸ್ ಸೌಲಭ್ಯ ಲಭ್ಯವಾಗಲಿದೆ.

ಏರ್‌ಟೆಲ್ 399ರೂ.ಪ್ಲ್ಯಾನ್
ಏರ್‌ಟೆಲ್ 399ರೂ.ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ರೋಮಿಂಗ್ ಕರೆಗಳು ಸೇರಿದಂತೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ವ್ಯಾಲಿಡಿಟಿ ಅವಧಿ ಮುಗಿಯುವವರೆಗೂ ಪ್ರತಿದಿನ 1.5GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್ 598ರೂ.ಪ್ಲ್ಯಾನ್
ಏರ್‌ಟೆಲ್ 598ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ.ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ.


Click it and Unblock the Notifications








