ಪ್ರಸ್ತುತ ಮಾರುಕಟ್ಟೆಯಲ್ಲಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಫೋನ್‌ಗಳು!

|

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರ ಅಗತ್ಯಮತ್ತು ಅವಶ್ಯ ಡಿವೈಸ್ ಆಗಿದ್ದು, ಮಾರುಕಟ್ಟೆಯಲ್ಲಿ ಹೊಸ ನಮೂನೆಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಕೊಡುತ್ತಲೆ ಸಾಗುತ್ತಿವೆ. ಪ್ರಮುಖ ಕಂಪನಿಗಳು ಸಹ ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ವರ್ಷದ ಆರಂಭದಲ್ಲಿಯೇ ಸಿಕ್ಕಾಪಟ್ಟೆ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಆಗುತ್ತಿವೆ. ಆದರೆ ಅವುಗಳಲ್ಲಿ ಕೆಲವೊಂದು ಮಾತ್ರ ಟ್ರೆಂಡಿಂಗ್ ಆಗುತ್ತವೆ. ಇನ್ನ ಕೆಲವು ಹೇಳ ಹೆಸರಿಲ್ಲದೇ ಹೋಗುತ್ತವೆ.

ಗ್ರಾಹಕರನ್ನು

ಹೌದು, ಮಾರುಕಟ್ಟೆಗೆ ಬಿಡುಗಡೆ ಕಾಣುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಲೀಡಿಂಗ್‌ ಸ್ಥಾನ ಪಡೆಯುವುದಿಲ್ಲ. ಕೆಲವು ಗ್ರಾಹಕರನ್ನು ಸೆಳೆಯುತ್ತವೆ ಮತ್ತೆ ಇನ್ನು ಕೆಲವು ಹೇಳ ಹೆಸರಿಲ್ಲದೇ ಮಾರುಕಟ್ಟೆಯಿಂದ ಮಾಯವಾಗುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್‌ಗಳು ಟ್ರೆಂಡಿಂಗ್‌ನಲ್ಲಿವೆ. ಹಾಗಾದರೇ ಸದ್ಯ ಟ್ರೆಂಡಿಂಗ್‌ನಲ್ಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಶಿಯೋಮಿ ಮಿ 11 ಅಲ್ಟ್ರಾ ಫೋನ್

ಶಿಯೋಮಿ ಮಿ 11 ಅಲ್ಟ್ರಾ ಫೋನ್

ಮಿ 11 ಅಲ್ಟ್ರಾ ಫೋನ್ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.81 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 256GB, 12GB RAM + 256GB ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಪೊಕೊ F3 ಫೋನ್

ಪೊಕೊ F3 ಫೋನ್

ಪೊಕೊ F3 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಇನ್ಫಿನಿಟಿ-ಒ-ಡಿಸ್‌ಪ್ಲೇ ಆಗಿದೆ. ಇದು ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ.

ಮಿ 11 ಪ್ರೊ ಫೋನ್

ಮಿ 11 ಪ್ರೊ ಫೋನ್

ಮಿ 11 ಪ್ರೊ ಫೋನ್ ಸಹ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.81 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 128GB, 8GB RAM + 256GB ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು 8 ಎಂಪಿ ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 20 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಮಿ 11 ಪ್ರೊ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಪೊಕೊ X3 ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ- ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪೊಕೊ X3 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB + 64GB, 6GB + 128GB ಹಾಗೂ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್‌ ಅನ್ನು ಹೊಂದಿದೆ. 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
The Poco F3 had to step down to second with the Redmi Note 10 Pro completing the podium.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X