2021ರಲ್ಲಿ ಎಂಟ್ರಿ ಕೊಟ್ಟ ಕೆಲವು ದೈತ್ಯ ಫೋನ್‌ಗಳ ಬಗ್ಗೆ ಒಂದು ನೋಟ!

|

ಪ್ರತಿ ವರ್ಷ ಮೊಬೈಲ್ ಮಾರುಕಟ್ಟೆಗೆ ಹಲವು ನೂತನ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತವೆ. ಅವುಗಳಲ್ಲಿ ಕೆಲವು ಫೋನ್‌ಗಳು ವಿಶೇಷ ಫೀಚರ್ಸ್‌ಗಳಿಂದ ಭಾರೀ ಸದ್ದು ಮಾಡುತ್ತವೆ. ಮತ್ತೆ ಕೆಲವು ಬಜೆಟ್‌ ದರದ ಫೋನ್‌ಗಳು ಗ್ರಾಹಕರನ್ನು ಆಕರ್ಷಿಸುತ್ತವೆ. ಇನ್ನು ಕೆಲವು ಫೋನ್‌ಗಳು ಹೇಳ ಹೆಸರಿಲ್ಲದೇ ಮಾರುಕಟ್ಟೆಯಿಂದ ಮರೆಯಾಗುತ್ತವೆ. ಈ ವರ್ಷ 2021 ಭಿನ್ನ ಶ್ರೇಣಿಯಲ್ಲಿ ಅನೇಕ ಫೋನ್‌ ಬಿಡುಗಡೆ ಆಗಿವೆ.

ಸ್ಯಾಮ್‌ಸಂಗ್

ಹೌದು, ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್, ಆಪಲ್, ಶಿಯೋಮಿ, ಒಪ್ಪೋ, ವಿವೋ, ಒನ್‌ಪ್ಲಸ್ ಸೇರಿದಂತೆ ಇತರೆ ಬ್ರ್ಯಾಂಡ್‌ಗಳ ಫೋನ್‌ಗಳು ಈ ವರ್ಷ ಲಾಂಚ್ ಆಗಿವೆ. ಆ ಪೈಕಿ ಕೆಲವು ದೈತ್ಯ ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಹಾಗಾದರೇ ಅಂತಹ ಕೆಲವು ಫೋನ್‌ಗಳ ಬಗ್ಗೆ ಈ ಲೇಖನದ ಮೂಲಕ ಒಂದು ನೋಟ. ಮುಂದೆ ಓದಿರಿ.

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ ಫೀಚರ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್‌ ಬೆಂಬಲಿಸಲಿದೆ.

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ 5G - ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ 5G - ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 5G ಸ್ಮಾರ್ಟ್‌ಫೋನ್ 6.80 ಇಂಚಿನ ಡಿಸ್‌ಪ್ಲೇ ಹೊಂದಿದೆ. ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಎಂಪಿ ಸೆನ್ಸಾರ್‌ ಪಡೆದಿದೆ. 12GB + 128GB ಮತ್ತು 16GB + 512GB ವೇರಿಯಂಟ್ ಆಯ್ಕೆಗಳು ಇವೆ. 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದೆ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಶಿಯೋಮಿ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಫೀಚರ್ಸ್‌

ಶಿಯೋಮಿ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಫೀಚರ್ಸ್‌

ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81-ಇಂಚಿನ WQHD + E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 120 Hz ರಿಫ್ರೆಶ್ ರೇಟ್‌, 480Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 515 PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ವಿವೋ X70 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ X70 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌

ವಿವೋ X70 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹಾಗೂ 120Hz ರಿಫ್ರೇಶ್‌ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
These Biggest Phone Launches of the year 2021.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X