Home
ಸುದ್ದಿಜಾಲ

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್‌ಗಳು ಅಧಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ!

ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಈಗಾಗಲೇ ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಲಾಕ್‌ಡೌನ್‌ ಅವಧಿಯಲ್ಲಿಯೂ ಸಹ ಅಧಿಕ ವ್ಯಾಲಿಡಿಟಿಯ ಯೋಜನೆಗಳನ್ನು ಬಿಡುಗಡೆ ಮಾಡಿತ್ತು. ಅವುಗಳಲ್ಲಿ ವಾರ್ಷಿಕ ವ್ಯಾಲಿಡಿಟಿಯ ಹಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಹೆಚ್ಚು ಗಮನ ಸೆಳೆದಿವೆ. ಬಿಎಸ್‌ಎನ್‌ಎಲ್‌ ಒಂದು ವರ್ಷದ ವ್ಯಾಲಿಡಿಟಿಗಿಂತ ಅಧಿಕ ವ್ಯಾಲಿಡಿಟಿಯ ಯೋಜನೆಯನ್ನು ಹೊಂದಿದೆ.

ಬಿಎಸ್‌‌ಎನ್ಎಲ್

ಹೌದು, ಬಿಎಸ್‌‌ಎನ್ಎಲ್ ಟೆಲಿಕಾಂ ಹಲವು ದೀರ್ಘಾವಧಿಯ ಯೋಜನೆಗಳನ್ನು ಒಳಗೊಂಡಿದೆ. ಅವುಗಳಲ್ಲಿ ಇತ್ತೀಚಿಗಿನ 2,399ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ವ್ಯಾಲಿಡಿಟಿಯಿಂದಾಗಿ ಆಕರ್ಷಕ ಅನಿಸಿದೆ. ಈ ಯೋಜನೆಯು ಒಟ್ಟು 600 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಅದರೊಂದಿಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದುಕೊಂಡಿದೆ. ಈ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿ ಹಾಗೂ ಅಧಿಕ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್‌ನ ಇತರೆ ಯೋಜನೆಗಳ ಬಗ್ಗೆ ಮುಂದೆ ನೋಡೋಣ.

ಬಿಎಸ್‌ಎನ್‌ಎಲ್‌ನ 2,399ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ 2,399ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

ಬಿಎಸ್‌ಎನ್‌ಎಲ್‌ 693ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 693ರೂ.ಪ್ಲ್ಯಾನ್

ಹಾಗೆಯೇ ಬಿಎಸ್‌ಎನ್‌ಎಲ್‌ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ.

Best Mobiles in India

English summary
The Rs 2399 prepaid plan doesn’t come with any data benefits.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+