ಬಿಎಸ್‌ಎನ್‌ಎಲ್ ಗ್ರಾಹಕರೇ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ ಟೆನ್ಷನ್ ಇರೋದೆ ಇಲ್ಲ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಇತ್ತೀಚಿಗೆ ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಜಿಯೋ, ವೊಡಾಫೋನ್-ಐಡಿಯಾ ಮತ್ತು ಏರ್‌ಟೆಲ್ ಟೆಲಿಕಾಂಗಳು ಪ್ರಸ್ತುತ ಆಕರ್ಷಕ ಪ್ಲ್ಯಾನ್ ಪರಿಚಯಿಸುತ್ತಾ ಸಾಗಿವೆ. ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವಂತಹ ಭರ್ಜರಿ ಪ್ರಯೋಜನಗಳ ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆ ಗ್ರಾಹಕರಿಗೆ ನೀಡಿದೆ. ಅವುಗಳು ಅಧಿಕ ಡೇಟಾ, ವ್ಯಾಲಿಡಿಟಿ ಹಾಗೂ ವಾಯಿಸ್ ಕರೆ ಪ್ರಯೋಜನಗಳನ್ನು ಒಳಗೊಂಡಿದೆ. ಇನ್ನು ಯೋಜನೆಗಳ ಬೆಲೆಯು ಭಿನ್ನ ಪ್ರೈಸ್‌ನಲ್ಲಿದ್ದು, ಆ ಪೈಕಿ 600ರೂ. ಒಳಗಿನ ರೀಚಾರ್ಜ್ ಪ್ಲ್ಯಾನ್ ಹೆಚ್ಚು ಗಮನ ಸೆಳೆದಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಹಲವು ಪ್ರೀಪೇಯ್ಡ್ ಯೋಜನೆಗಳು ಲಿಸ್ಟ್ ಹೊಂದಿದೆ. ರೀಚಾರ್ಜ್ ಮಾಡಿಸುವ ಗ್ರಾಹಕರು ಮಾತ್ರ ಬಜೆಟ್ ದರದ ಯೋಜನೆ ಆಯ್ಕೆ ಮಾಡುತ್ತಾರೆ. ಆ ಪೈಕಿ ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಇದು ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಅತ್ಯುತ್ತಮ ಯೋಜನೆ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಒಟ್ಟು 450 GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 599ರೂ. ಪ್ರೀಪೇಯ್ಡ್ ಯೋಜನೆ ಇತರೆ ಪ್ರಯೋಜನಗಳೇನು? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 2399ರೂ. ವಾರ್ಷಿಕ ಯೋಜನೆ
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್ 1212ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 1212ರೂ. ಪ್ರೀಪೇಯ್ಡ್ ಪ್ಲ್ಯಾನ್ ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

ಬಿಎಸ್‌ಎನ್‌ಎಲ್ 499ರೂ. ಪ್ರಿಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.


Click it and Unblock the Notifications








