ಬಿಎಸ್‌ಎನ್‌ಎಲ್ ಈ ಪ್ಲ್ಯಾನ್ ರೀಚಾರ್ಜ್ ಮಾಡಿದರೇ ಡೇಟಾ ಬಗ್ಗೆ ಚಿಂತಿಸಬೇಕಿಲ್ಲ!
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ರೀತಿ ಬಿಎಸ್‌ಎನ್‌ಎಲ್ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಭರ್ಜರಿ ದೈನಂದಿನ ಡೇಟಾ ಪ್ರಯೋಜನವನ್ನು ಪಡೆದಿದ್ದು, ಹೆಚ್ಚಿನ ಡೇಟಾ ಬಳಕೆ ಮಾಡುವ ಗ್ರಾಹಕರ ಗಮನ ಸೆಳೆದಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಅತ್ಯುತ್ತಮ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 559ರೂ. 395ರೂ, 1498ರೂ, 997ರೂ, 2399ರೂ ಮತ್ತು 666ರೂ ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚು ಗಮನ ಸೆಳೆದಿವೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಗಳು ಉಪಯುಕ್ತ ಎನ್ನಬಹುದಾಗಿದೆ. ಈ ಪ್ಲ್ಯಾನ್‌ಗಳಲ್ಲಿ ಚಂದಾದಾರರಿಗೆ ಪ್ರತಿದಿನ ಅತ್ಯುತ್ತಮ ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಈ ಯೋಜನೆಗಳ ಇತರೆ ಪ್ರಯೋಜನಗಳೇನು?..ರೀಚಾರ್ಜ್ ಮಾಡಿಸಲು ಯೋಗ್ಯವೇ? ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 2,399ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಪಡೆದಿದೆ.

ಬಿಎಸ್‌ಎನ್‌ಎಲ್ 997ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 540GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 395ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 71 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 142GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 1498ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 730GB ಡೇಟಾ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಲಭ್ಯವಾಗುವುದಿಲ್ಲ.

ಬಿಎಸ್‌ಎನ್‌ಎಲ್ 197ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 197ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 150 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಆದರೆ ಪ್ರಯೋಜನಗಳು ಆರಂಭಿಕ 18 ದಿನಗಳು ಮಾತ್ರ ಲಭ್ಯವಾಗಲಿವೆ.

ಬಿಎಸ್‌ಎನ್‌ಎಲ್ 397ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 397ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 300 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಆದರೆ ಪ್ರಯೋಜನಗಳು ಆರಂಭಿಕ 60 ದಿನಗಳು ಮಾತ್ರ ಲಭ್ಯವಾಗಲಿವೆ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಹಾಗೂ ಜಿಂಗ್ ಆಪ್ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.

ಬಿಎಸ್‌ಎನ್‌ಎಲ್ 187ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 187ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯ ಸಿಗಲಿದೆ.


Click it and Unblock the Notifications








