ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ ಸಮಸ್ಯೆ ಇರಲ್ಲ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್, ಚಂದಾದಾರರನ್ನು ಸೆಳೆಯಲು ಅಧಿಕ ಪ್ರಯೋಜನಗಳ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಏರ್‌ಟೆಲ್ ಟೆಲಿಕಾಂ, ಮುಂಚೂಣಿಯಲ್ಲಿರುವ ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವಂತಹ ಅಧಿಕ ಡೇಟಾ ಯೋಜನೆಗಳ ಆಯ್ಕೆ ಸಹ ಹೊಂದಿದೆ. ಆ ಪೈಕಿ ಏರ್‌ಟೆಲ್‌ನ ಕೆಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದು, ಗ್ರಾಹಕರನ್ನು ಆಕರ್ಷಿಸಿವೆ.

ಹೌದು, ಏರ್‌ಟೆಲ್ ಟೆಲಿಕಾಂ ಕೆಲವು ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ದೈನಂದಿನ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಏರ್‌ಟೆಲ್ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಲಿಸ್ಟ್ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆ ಹಾಗೂ ಇತರೆ ಕೆಲವು ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ ಅಧಿಕ ಡೇಟಾ ಪ್ರಯೋಜನದ ಯೋಜನೆಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








