Home
ಸುದ್ದಿಜಾಲ

ಅಗ್ಗದ ಬೆಲೆಗೆ ಅತ್ಯುತ್ತಮ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಗಮನಿಸಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ಐಟೆಲ್‌ ಮೊಬೈಲ್‌ ಸಂಸ್ಥೆಯು ಅಗ್ಗದ ಫೋನ್‌ಗಳ ಮೂಲಕ ಹೊಸ ಅಲೆ ಎಬ್ಬಿಸಿದೆ. ಅಗ್ಗದ ಪ್ರೈಸ್‌ ಟ್ಯಾಗ್‌ ಹೊಂದಿದ್ದರೂ ಸಂಸ್ಥೆಯ ಕೆಲವು ಫೋನ್‌ಗಳು ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳದಿವೆ. ಈ ದೀಪಾವಳಿ ಹಬ್ಬದ ವೇಳೆ ಅಗ್ಗದ ವಿಭಾಗದಲ್ಲಿ ನೂತನ ಮೊಬೈಲ್ ಖರೀದಿ ಮಾಡುವವರ ಚಿತ್ತ ಸೆಳೆಯು ಭಿನ್ನ ಶ್ರೇಣಿ ಪಡೆದುಕೊಂಡಿದೆ.

ಹೌದು, ಐಟೆಲ್‌ ಕಂಪನಿಯು ಭಿನ್ನ ಬೆಲೆಯಲ್ಲಿ ಹಲವು ಫೋನ್‌ ಮಾದರಿಗಳನ್ನು ಒಳಗೊಂಡಿದೆ. ಈ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಪ್ಲ್ಯಾನ್ ಮಾಡಿದ್ರೆ, ಐಟೆಲ್‌ ಸಂಸ್ಥೆಯ ಫೋನ್‌ಗಳು ಹೆಚ್ಚಿನ ಗಮನ ಸೆಳೆಯುತ್ತವೆ. ಅಗ್ಗದ ಬೆಲೆಗೆ ಲಭ್ಯ ಇರುವ ಐಟೆಲ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ. ಮುಂದೆ ಓದಿರಿ.

ಅಗ್ಗದ ಬೆಲೆಗೆ ಅತ್ಯುತ್ತಮ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಗಮನಿಸಿ!

ಐಟೆಲ್‌ P55 5G ಫೋನ್‌

ಐಟೆಲ್‌ P55 5G ಮೊಬೈಲ್‌ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಜೊತೆಗೆ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲ ಸಹ ಹೊಂದಿದೆ.

ಹಾಗೆಯೇ 4GB RAM + 64GB ಹಾಗೂ 6GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಜೊತೆಗೆ 18W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.

ಅಗ್ಗದ ಬೆಲೆಗೆ ಅತ್ಯುತ್ತಮ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಗಮನಿಸಿ!

ಐಟೆಲ್ A60 ಫೋನ್‌

ಐಟೆಲ್ A60 ಸ್ಮಾರ್ಟ್‌ಫೋನ್‌ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಫೋನ್‌ 1.4GHz ಕ್ವಾಡ್ ಕೋರ್ SC9832E ಪ್ರೊಸೆಸರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಹಾಗೆಯೇ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸರ್ ನಲ್ಲಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್‌ ಬ್ಲೂ ಮತ್ತು ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಅಗ್ಗದ ಬೆಲೆಗೆ ಅತ್ಯುತ್ತಮ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಗಮನಿಸಿ!

ಐಟೆಲ್‌ P40+ ಫೋನ್‌

ಐಟೆಲ್‌ P40+ ಫೋನ್‌ 6.8 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಡಿಸ್‌ಪ್ಲೇ 720 x 1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಹಾಗೆಯೇ ಇದು ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ.

ಈ ಮೊಬೈಲ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಇದು 7,000 mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಸೌಲಭ್ಯದ ಸಪೋರ್ಟ್‌ ಮಾಡುತ್ತದೆ.

Best Mobiles in India

English summary
These itel smartphones available at affordable price tag. check details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+