Home
ಸುದ್ದಿಜಾಲ

ಉಚಿತವಾಗಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ ಬೇಕೆ?..ಇಲ್ಲಿ ಗಮನಿಸಿ!

ರಿಲಯನ್ಸ್‌ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ದೀರ್ಘ ವ್ಯಾಲಿಡಿಟಿ ಸೌಲಭ್ಯ ಸಹ ಒಳಗೊಂಡಿವೆ. ಇನ್ನು ಕೆಲವು ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳು ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದಿವೆ.

ಏರ್‌ಟೆಲ್‌ ಹಾಗೂ ವಿ ಟೆಲಿಕಾಂ

ಹೌದು, ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಕೆಲವು ಪೋಸ್ಟ್‌ಪೇಯ್ಡ್‌ ಯೋಜನೆಗಳಲ್ಲಿ ಅಮೆಜಾನ್‌ ಪ್ರೈಮ್‌ ವಿಡಿಯೋ (Amazon Prime) ಓಟಿಟಿ ಚಂದಾದಾರಿಕೆ ಪ್ರಯೋಜನ ನೀಡಿವೆ. ಹಾಗೆಯೇ ಮತ್ತೆ ಕೆಲವು ಪೋಸ್ಟ್‌ಪೇಯ್ಡ್‌ ಯೋಜನೆಗಳು ಅಮೆಜಾನ್‌ ಪ್ರೈಮ್‌ ಜೊತೆಗೆ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆಯನ್ನು ಪಡೆದಿವೆ. ಇದರೊಂದಿಗೆ ಡೇಟಾ, ವಾಯಿಸ್‌ ಕರೆ ಸೇರಿದಂತೆ ಮತ್ತಷ್ಟು ಸೌಲಭ್ಯ ಲಭ್ಯವಾಗಲಿವೆ. ಹಾಗಾದರೆ ಅಮೆಜಾನ್‌ ಪ್ರೈಮ್‌ ಚಂದಾದಾರಿಕೆ ಪಡೆದ ಜಿಯೋ, ಏರ್‌ಟೆಲ್‌ ಹಾಗೂ ವಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ ಮತ್ತು ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯವಾಗಲಿದೆ.ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌, ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದಲ್ಲದೆ, ಜಿಯೋ ಆಪ್ಸ್‌ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇನ್ನುಳಿದಂತೆ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ.

ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯೂ ದೊರೆಯುತ್ತದೆ.

ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ಸಿಗಲಿದೆ. ಹೆಚ್ಚುವರಿಯಾಗಿ ಒಂದು ವರ್ಷದ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸಿಗಲಿದೆ. ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯೂ ದೊರೆಯುತ್ತದೆ.

ವಿ ಟೆಲಿಕಾಂ 501ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂ 501ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂ 501ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 90 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯೂ ದೊರೆಯುತ್ತದೆ.

ವಿ ಟೆಲಿಕಾಂ 701ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ಡೇಟಾದೊಂದಿಗೆ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯೂ ದೊರೆಯುತ್ತದೆ.

Best Mobiles in India

English summary
These Jio, Airtel, Vi plans offering free Amazon Prime membership.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+