Home
ಸುದ್ದಿಜಾಲ

ಬಜೆಟ್ ಬೆಲೆಯಲ್ಲಿ ಲಭ್ಯವಿರುವ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸೌಲಭ್ಯದ ಯೋಜನೆಗಳು!

ದೇಶದ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗಿನ ದಿನಗಳಲ್ಲಿ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಸೇವಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್‌ಟೆಲ್‌ ಹಾಗೂ ಜಿಯೋ ಟೆಲಿಕಾಂಗಳು ಕೆಲವು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ನೀಡಿದೆ. ಈ ಯೋಜನೆಗಳು ಇತರೆ ಆಕರ್ಷಕ ಪ್ರಯೋಜನಗಳನ್ನು ಹೊಂದಿವೆ.

ಟೆಲಿಕಾಂಗಳು

ಹೌದು, ಏರ್‌ಟೆಲ್‌ ಹಾಗೂ ಜಿಯೋ ಟೆಲಿಕಾಂಗಳು ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ಸುಮಾರು 600ರೂ. ಪ್ರೈಸ್‌ಟ್ಯಾಗ್‌ನ ಒಳಗೆ ಇರುವುದು ಗ್ರಾಹಕರಿಗೆ ಆಕರ್ಷಕ ಅನಿಸಿವೆ. ಅವುಗಳು ಭಿನ್ನ ದರದಲ್ಲಿದ್ದು, ಭಿನ್ನ ವ್ಯಾಲಿಡಿಟಿ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ಓದಿರಿ.

ಏರ್‌ಟೆಲ್‌ 448ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್‌ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್‌ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 401ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 401ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳ ಕರೆಗಳು ಸಹ ಅನಿಯಮಿತ ಉಚಿತ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಇದೆ. ಹಾಗೆಯೇ ಜಿಯೋ ಆಪ್ಸ್‌ ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್‌ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್‌ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್‌ಟೆಲ್‌ 401ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 401ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಜಿಯೋ 2599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 2599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋದ 2,599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

Best Mobiles in India

English summary
These Jio And Airtel Plans Offers Disney Hotstar Subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+