ಪ್ರತಿದಿನ 3GB ಡೇಟಾ ಬೇಕೆ?..ಹಾಗಿದ್ರೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿರಿ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್ ಜಿಯೋ ಸೇರಿದಂತೆ ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ನೇರಾ ನೇರ ಪೈಪೋಟಿ ಇದೆ. ಮೂರು ಟೆಲಿಕಾಂ ಕಂಪನಿಗಳು ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಕರ್ಷಕ ಯೋಜನೆ ಪರಿಚಯಿಸಿವೆ. ಆ ಪೈಕಿ ಜಿಯೋ ತನ್ನ ಕೆಲವು ಪ್ರೀಪೇಯ್ಡ್ ಯೋಜನೆಗಳಲ್ಲಿ ಅಧಿಕ ಡೇಟಾ ಪ್ರಯೋಜನ ಲಭ್ಯ ಮಾಡಿ ಗಮನ ಸೆಳೆದಿದೆ.
ಹೌದು, ಜಿಯೋ ಟೆಲಿಕಾಂ ಭಿನ್ನ ದೈನಂದಿನ ಡೇಟಾ ಸೌಲಭ್ಯದ ಯೋಜನೆಗಳ ಆಯ್ಕೆ ಪಡೆದಿದೆ. ಆ ಪೈಕಿ ಕೆಲವು ಯೋಜನೆಗಳು ನಿತ್ಯ 3GB ಡೇಟಾ ಪ್ರಯೋಜನ ಒಳಗೊಂಡ ಯೋಜನೆಗಳು ಇವೆ. ಅಧಿಕ ದೈನಂದಿನ ಡೇಟಾ ಬಯಸುವ ಗ್ರಾಹಕರಿಗೆ ಈ ಯೋಜನೆಗಳು ಹೆಚ್ಚು ಆಕರ್ಷಕ ಎನಿಸುತ್ತವೆ. ಹಾಗಾದರೆ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುವ ಜಿಯೋದ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 999ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದ್ದು, ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 252 GB ಡೇಟಾ ಪ್ರಯೋಜನ ಸಿಗಲಿದೆ.
ಇದರೊಂದಿಗೆ ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ ಸೇರಿ ಇತರೆ ಕೆಲವು ಜಿಯೋ ಆಪ್ಸ್‌ಗಳ ಸೇವೆ ಸಹ ಲಭ್ಯವಾಗಲಿದೆ.
ಜಿಯೋ 1499ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ ಈ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು ಕೂಡಾ 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದ್ದು, ಇನ್ನು ಈ ಪ್ಲ್ಯಾನ್ ಸಹ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 252 GB ಡೇಟಾ ಪ್ರಯೋಜನ ಸಿಗಲಿದೆ.
ಇದರ ಜೊತೆಗೆ ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ನೆಟ್‌ಫ್ಲಿಕ್ಸ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದ್ದು, ಉಳಿದಂತೆ ಜಿಯೋ ಟಿವಿ, ಜಿಯೋ ಸಿನಿಮಾ ಸೇರಿ ಇತರೆ ಕೆಲವು ಜಿಯೋ ಆಪ್ಸ್‌ಗಳ ಸೇವೆ ಸಹ ಲಭ್ಯ.
ಜಿಯೋ 399ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದ್ದು, ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 90 GB ಡೇಟಾ ಸೌಲಭ್ಯ ದೊರೆಯುತ್ತದೆ.
ಹಾಗೆಯೇ ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ ಸೇರಿ ಇತರೆ ಕೆಲವು ಜಿಯೋ ಆಪ್ಸ್‌ಗಳ ಸೇವೆ ಸಹ ಲಭ್ಯವಾಗಲಿದೆ.
ಜಿಯೋ 219ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಸಂಸ್ಥೆಯ 219ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಇದು 14 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದ್ದು, ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 44 GB ಡೇಟಾ ಸೌಲಭ್ಯ ಸಿಗಲಿದೆ.
ಹಾಗೆಯೇ ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ ಸೇರಿ ಇತರೆ ಕೆಲವು ಜಿಯೋ ಆಪ್ಸ್‌ಗಳ ಸೇವೆ ಸಹ ಲಭ್ಯವಾಗಲಿದೆ.


Click it and Unblock the Notifications








