ಇಂಥಾ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಹೆಚ್ಚು ಕಡಿಮೆ ಎರಡು ತಿಂಗಳು ಟೆನ್ಷನ್ ಇರಲ್ಲ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿರುವ ರಿಲಯನ್ಸ್ ಜಿಯೋ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆಯುತ್ತಿದೆ. ಜಿಯೋ ಸಂಸ್ಥೆಯ ಬಹುತೇಕ ಪ್ರೀಪೇಯ್ಡ್ ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿವೆ. ಆದರೆ ಕೆಲವು ಪ್ಲ್ಯಾನ್ ಡೇಟಾ ಜೊತೆ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ.
ಹೌದು, ಜಿಯೋ ಟೆಲಿಕಾಮ ಸಂಸ್ಥೆಯು ದೈನಂದಿನ ಅಧಿಕ ಡೇಟಾ ಸೌಲಭ್ಯ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಗ್ರಾಹಕರಿಗೆ ನೀಡಿದೆ. ಆ ಪೈಕಿ 56 ದಿನಗಳ ವ್ಯಾಲಿಡಿಟಿ ಪ್ರಯೋಜನದ ಯೋಜನೆಗಳು ಆಕರ್ಷಕ ಪ್ಲ್ಯಾನ್‌ಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿವೆ.

ಅಂದಹಾಗೆ ಈ ಯೋಜನೆಗಳು ವ್ಯಾಲಿಡಿಟಿಯಿಂದ ಮಾತ್ರವಲ್ಲದೆ ದೈನಂದಿನ ಡೇಟಾ, ಎಸ್‌ಎಮ್‌ಎಸ್ ಹಾಗೂ ವಾಯಿಸ್ ಕರೆಯ ಸೌಲಭ್ಯಗಳ ಮೂಲಕವು ಚಂದಾದಾರರನ್ನು ಸೆಳೆದಿವೆ. ಇದರೊಂದಿಗೆ ಜಿಯೋದ ಕೆಲವು ಯೋಜನೆಗಳು ಹೆಚ್ಚುವರಿ ಸೌಲಭ್ಯದ ಪ್ರಯೋಜನ ಸಹ ಪಡೆದಿವೆ. ಹಾಗಾದರೆ 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ ಜಿಯೋ ಟೆಲಿಕಾಂನ ಕೆಲವು ಆಕರ್ಷಕ ಪ್ಲ್ಯಾನ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.
ಜಿಯೋ 479ರೂ. ಪ್ರಿಪೇಯ್ಡ್ ಯೋಜನೆಯ ಮಾಹಿತಿ : ಜಿಯೋ ಟೆಲಿಕಾಂನ 479ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಬಳಕೆದಾರರಿಗೆ ದೈನಂದಿನ 1.5 GB ಡೇಟಾ ಪ್ರಯೋಜನ ನೀಡುತ್ತದೆ. ಹಾಗೆಯೇ ದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಗಳಿಗೆ ಅನಿಯಮಿತ ಧ್ವನಿ ಕರೆಗಳು ಸೌಲಭ್ಯ ಹೊಂದಿದೆ. ಇದಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಪಡೆದುಕೊಂಡಿದೆ.
ಜಿಯೋ 529ರೂ. ಪ್ರಿಪೇಯ್ಡ್ ಯೋಜನೆಯ ಮಾಹಿತಿ : ಜಿಯೋ ಟೆಲಿಕಾಂನ 529ರೂ. ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಬಳಕೆದಾರರಿಗೆ ದೈನಂದಿನ 1.5 GB ಡೇಟಾ ಪ್ರಯೋಜನ ನೀಡುತ್ತದೆ. ಹಾಗೆಯೇ ದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಗಳಿಗೆ ಅನಿಯಮಿತ ಧ್ವನಿ ಕರೆಗಳು ಸೌಲಭ್ಯ ಹೊಂದಿದೆ. ಇದಲ್ಲದೇ ಹೆಚ್ಚುವರಿಯಾಗಿ ಜಿಯೋ ಸಾವನ್ ಆಪ್ ಸದಸ್ಯತ್ವ ಪಡೆದಿದ್ದು, ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಪಡೆದುಕೊಂಡಿದೆ.
ಜಿಯೋ 533ರೂ. ಪ್ರಿಪೇಯ್ಡ್ ಯೋಜನೆಯ ಪ್ರಯೋಜನಗಳ ಮಾಹಿತಿ : ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಈ ಅವಧಿಯಲ್ಲಿ ಗ್ರಾಹಕರಿಗೆ ದಿನವೂ 2GB ಡೇಟಾ ಪ್ರಯೋಜನ ನೀಡುತ್ತದೆ. ಇದರ ಜೊತೆಗೆ ಜಿಯೋದಿಂದ ಜಿಯೋ ನೆಟವರ್ಕ ಉಚಿತ ವಾಯಿಸ್ ಕರೆಗಳು ಸೌಲಭ್ಯ ಹಾಗೂ ಜಿಯೋದಿಂದ ಇತರೆ ನೆಟವರ್ಕ ಗೂ ಸಹ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ ಆಗಲಿದೆ.
ಜಿಯೋ 589ರೂ. ಪ್ರಿಪೇಯ್ಡ್ ಯೋಜನೆಯ ಮಾಹಿತಿ : ಜಿಯೋ ಟೆಲಿಕಾಂನ 589ರೂ. ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಬಳಕೆದಾರರಿಗೆ ನಿತ್ಯವೂ 2 GB ಡೇಟಾ ಪ್ರಯೋಜನ ಒದಗಿಸಲಿದೆ. ಹಾಗೆಯೇ ದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಗಳಿಗೆ ಅನಿಯಮಿತ ಧ್ವನಿ ಕರೆಗಳು ಸೌಲಭ್ಯ ಪಡೆದಿದೆ. ಇದಲ್ಲದೇ ಹೆಚ್ಚುವರಿಯಾಗಿ ಜಿಯೋ ಸಾವನ್ ಆಪ್ ಸದಸ್ಯತ್ವ ಪಡೆದಿದ್ದು, ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಪಡೆದುಕೊಂಡಿದೆ.
ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಯೋಜನೆಯ ಮಾಹಿತಿ : ಜಿಯೋ 2999ರೂ. ಪ್ರೀಪೇಯ್ಡ್ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಉನ್ನು ಗ್ರಾಹಕರಿಗೆ ನೀಡುತ್ತದೆ. ಈ ಅವಧಿಯಲ್ಲಿ ಚಂದಾದಾರರಿಗೆ ನಿತ್ಯವೂ 2.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ಧ್ವನಿ ಕರೆಗಳ ಪ್ರಯೋಜನ ಇದೆ. ಇದರೊಂದಿಗೆ ನಿತ್ಯ 100 ಎಸ್ಎಮ್ಎಸ್ ಸೌಲಭ್ಯ ಹಾಗೂ ಹೆಚ್ಚುವರಿ ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








