ಜಿಯೋ ಗ್ರಾಹಕರೇ ಈ ಮೂರು ಪ್ಲ್ಯಾನ್‌ಗಳಲ್ಲಿ ಒಂದನ್ನು ಆಯ್ದುಕೊಳ್ಳಿ!
ದೇಶದ ಟೆಲಿಕಾಂ ವಲಯದಲ್ಲಿ ಚಂದಾದಾರರ ಫೇವರೇಟ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂ, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಪ್ರಸ್ತುತ ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಟೆಲಿಕಾಂ, ಏರ್‌ಟೆಲ್, ವಿ ಟೆಲಿಕಾಂ ಗಳಿಗೆ ಸ್ಪರ್ಧೆ ನೀಡುವ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಜಿಯೋ ಕಂಪನಿಯು ಕೆಲವು ಪ್ರಿಪೇಯ್ಡ್ ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿಯ ಪ್ರಯೋಜನ ಪಡೆದಿದೆ. ಆ ಪೈಕಿ ಕೆಲವು ಪ್ಲ್ಯಾನ್‌ಗಳು ಹೆಚ್ಚಿನ ದೈನಂದಿನ ಡೇಟಾ ಪ್ರಯೋಜನ ಪಡೆದಿವೆ.

ಜಿಯೋ ಟೆಲಿಕಾಂ ಕೆಲವು ಭಿನ್ನ ಪ್ರಯೋಜನಗಳ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್ ಹೊಂದಿದೆ. ಪ್ರತಿದಿನ ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಏರ್‌ಟೆಲ್ ಟೆಲಿಕಾಂ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ.

ಡೇಟಾ, ಕರೆ, ಎಸ್‌ಎಮ್‌ಎಸ್, ವ್ಯಾಲಿಡಿಟಿ ಪ್ರಯೋಜನಗಳೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ಸಹ ಒಳಗೊಂಡಿವೆ. ಹಾಗಾದರೇ ಗ್ರಾಹಕಸ್ನೇಹಿ ಬೆಲೆಗೆ ಲಭ್ಯ ಇರುವ ಅತ್ಯುತ್ತಮ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನದ ಜಿಯೋದ ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ.

ಜಿಯೋದ 1199 ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 1199 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 2545ರೂ. ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಜಿಯೋದ ಕೆಲವು ಆಪ್‌ಗಳು ಸಹ ಲಬ್ಯವಾಗಲಿವೆ.


Click it and Unblock the Notifications








