ಜಿಯೋ ಗ್ರಾಹಕರೇ ಒಂದು ತಿಂಗಳ ವ್ಯಾಲಿಡಿಟಿ ಅವಧಿಗೆ ಇವೇ ಬೆಸ್ಟ್ ಪ್ಲ್ಯಾನ್‌ಗಳು!
ರಿಲಾಯನ್ಸ್ ಜಿಯೋ ಟೆಲಿಕಾಂ ದೇಶದಲ್ಲಿ ಹೆಚ್ಚಿನ ಬಳಕೆದಾರರನ್ನು ಹೊಂದಿದ್ದು, ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಜಿಯೋ ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಅನ್ನು ಹೊಂದಿದ್ದು, ಅವುಗಳಲ್ಲಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಯೋಜನೆಗಳು ಸೇರಿವೆ. ಆದರೆ ಬಹುತೇಕ ಗ್ರಾಹಕರು ಅಗ್ಗದ ಬೆಲೆಯಲ್ಲಿ ಅಧಿಕ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಹೌದು, ಜಿಯೋ ಸಂಸ್ಥೆಯು ಕೆಲವು ಅಲ್ಪಾವಧಿಯ ಪ್ಲ್ಯಾನ್‌ಗಳು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದ್ದು, ಜೊತೆಗೆ ಪ್ರತಿದಿನ ಡೇಟಾ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಹೊಂದಿವೆ. ಇದರೊಂದಿಗೆ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಸಹ ಒಳಗೊಂಡಿವೆ. 28 ದಿನಗಳ ವ್ಯಾಲಿಡಿಟಿ ಪಡೆದಿರುವ ಜಿಯೋ ಟೆಲಿಕಾಂನ ಎಲ್ಲ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಜಿಯೋ 129ರೂ. ಪ್ಲಾನ್
ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ 1000 ನಿಮಿಷಗಳ ಕರೆ ಮಿತಿಯನ್ನು ಪಡೆದಿರುವ ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋದ 199ರೂ ಪ್ಲ್ಯಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಜಿಯೋ 249ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 349ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ವಾಯಿಸ್ ಕರೆಗಾಗಿ ಒಟ್ಟು 1000 ನಿಮಿಷಗಳ ಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








