Home
ಸುದ್ದಿಜಾಲ

ಜಿಯೋ ಗ್ರಾಹಕರೇ ಕಡಿಮೆ ಬೆಲೆಯಲ್ಲಿ ಅಧಿಕ ಡೇಟಾಗಾಗಿ ಈ ಪ್ಲ್ಯಾನ್ ಉತ್ತಮ!

ದೇಶದ ಟೆಲಿಕಾಂ ವಲಯದಲ್ಲಿ ಪ್ರತಿದಿನ 1GB ಡೇಟಾ ಸೌಲಭ್ಯ ಒದಗಿಸುವ ಮೂಲಕ ಜಿಯೋ ಗ್ರಾಹಕರ ಮೆಚ್ಚುಗೆ ಪಡೆಯಿತು. ಆರಂಭದಲ್ಲಿ 1GB ಡೇಟಾ ನೀಡುತ್ತಿದ್ದ ಜಿಯೋ ಇತರೆ ಟೆಲಿಕಾಂಗಳ ಪೈಪೋಟಿ ಇಳಿದ ನಂತರ 1.5GB, ಆನಂತರ 2GB ಡೇಟಾ ಪ್ರಯೋಜನ ಹೆಚ್ಚಿಸುತ್ತಾ ಸಾಗಿದೆ. ಸದ್ಯ ಪ್ರತಿದಿನ 3GB ಡೇಟಾ ಪ್ರಯೋಜನ ಒದಗಿಸುವ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಸಹ ಇವೆ. ಆದರೆ ಬಜೆಟ್‌ ದರದ ಯೋಜನೆಗಳಿಗೆ ಹೆಚ್ಚು ಬೇಡಿಕೆ.

ರಿಲಾಯನ್ಸ್‌ ಜಿಯೋ

ಹೌದು, ರಿಲಾಯನ್ಸ್‌ ಜಿಯೋ ಟೆಲಿಕಾಂನ ಬಹುತೇಕ ಪ್ಲ್ಯಾನ್‌ಗಳು ಅಧಿಕ ವ್ಯಾಲಿಡಿಟಿ ಜೊತೆಗೆ ಹೆಚ್ಚಿನ ಡೇಟಾ ಪ್ರಯೋಜನದ ಸೌಲಭ್ಯಗಳನ್ನು ಒಳಗೊಂಡಿವೆ. ಪ್ರಸ್ತುತ ಬಳಕೆದಾರರು ಪ್ರತಿದಿನ 2GB ಡೇಟಾ ಒದಗಿಸುವ ಹಾಗೂ 84 ದಿನಗಳ ವ್ಯಾಲಿಡಿಟಿಯ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಇಷ್ಟ ಪಡುತ್ತಾರೆ. ಈ ನಿಟ್ಟಿನಲ್ಲಿ ಸುಮಾರು 600ರೂ. ಒಳಗೆ ಜಿಯೋ ಹಲವು ಉತ್ತಮ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಹಾಗಾದರೆ ಪ್ರತಿದಿನ 2GB ಡೇಟಾ ಒದಗಿಸುವ ಜಿಯೋದ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಜಿಯೋ 249ರೂ. ಪ್ಲ್ಯಾನ್

ಜಿಯೋ 249ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 56GB ಡೇಟಾ ಪ್ರಯೋಜನ ದೊರೆಯುತ್ತದೆ.

ಜಿಯೋ 444ರೂ. ಪ್ಲ್ಯಾನ್

ಜಿಯೋ 444ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಈ ಪ್ಲ್ಯಾನಿನಲ್ಲಿ ಒಟ್ಟು 112GB ಡೇಟಾ ಲಭ್ಯವಾಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 2,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ ಪೂರ್ಣ ಅವಧಿಗೆ ಒಟ್ಟು 2000ಎಸ್ಎಮ್ಎಸ್‌ಗಳ ಪ್ರಯೋಜನ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಈ ಪ್ಲ್ಯಾನಿನಲ್ಲಿ ಒಟ್ಟಾರೇ 168GB ಡೇಟಾ ಪ್ರಯೋಜನವು ದೊರೆಯುತ್ತದೆ.

ಜಿಯೋ 3GB ಡೇಟಾ ಪ್ಲ್ಯಾನ್

ಜಿಯೋ 3GB ಡೇಟಾ ಪ್ಲ್ಯಾನ್

ಜಿಯೋ 349ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ಒದಗಿಸುತ್ತದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಪೂರ್ಣ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಹೊಂದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 1,000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಅಂದಹಾಗೆ ಈ ಪ್ಲ್ಯಾನಿ ಒಟ್ಟು 28 ದಿನಗಳ ಪ್ಯಾಲಿಡಿಟಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಒಟ್ಟು 84GB ಡೇಟಾ ಒದಗಿಸುತ್ತದೆ.

Best Mobiles in India

English summary
Jio telecom prepaid plans offers daily data benefits but some plans offers daily 2gb data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+