ಜಿಯೋದ ಈ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿಸಿದ್ರೆ ಡೇಟಾ ಟೆನ್ಷನ್ ಇರಲ್ಲ!
ಸ್ಮಾರ್ಟ್‌ಫೋನ್ ಬಳಕೆ ಮಾಡುವ ಪ್ರತಿಯೊಬ್ಬ ಬಳಕೆದಾರರು ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಇರುವ ಪ್ಲ್ಯಾನ್ ಆಯ್ಕೆ ಮಾಡಿಕೊಳ್ಳಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಟೆಲಿಕಾಂ ಸಂಸ್ಥೆಗಳು ಸಹ ಬೆಸ್ಟ್ ಡೇಟಾ ಪ್ಲ್ಯಾನ್‌ಗಳನ್ನು ನೀಡುತ್ತಲೇ ಸಾಗಿವೆ. ಆದ್ರೆ ಜಿಯೋ ಟೆಲಿಕಾಂಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಗ್ರಾಹಕರಿಗೆ ಹೆಚ್ಚು ಅಟ್ರ್ಯಾಕ್ಟ್ ಮಾಡಿದ್ದು, ಅಧಿಕ ಡೇಟಾ ಸೌಲಭ್ಯ ಹೊಂದಿವೆ.

ಹೌದು, ಜಿಯೋ ಟೆಲಿಕಾಂ ಅಧಿಕ ಡೇಟಾದ ಹಲವು ಯೋಜನೆಗಳನ್ನು ಒಳಗೊಂಡಿವೆ. ಅವುಗಳಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುವ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಡೇಟಾ ಜೊತೆಗೆ ಉಚಿತ ವಾಯಿಸ್ ಕರೆ ಮತ್ತು ಅಧಿಕ ವ್ಯಾಲಿಡಿಟಿ ಸೌಲಭ್ಯಗಳು ಚಂದಾದಾರರಿಗೆ ಉಪಯುಕ್ತ ಅನಿಸಿವೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರು 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿಸಿಕೊಳ್ಳುತ್ತಾರೆ. ಹೀಗೆ ಪ್ರತಿದಿನ 2GB ಡೇಟಾ ಸೌಲಭ್ಯ ನೀಡುವ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 249ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 444ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 2,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ ಪೂರ್ಣ ಅವಧಿಗೆ ಒಟ್ಟು 2000ಎಸ್ಎಮ್ಎಸ್‌ಗಳ ಪ್ರಯೋಜನ.

ಜಿಯೋ 599ರೂ. ಪ್ಲ್ಯಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.


Click it and Unblock the Notifications








