Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಡೈಲಿ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ!

ಪ್ರಸ್ತುತ ಟೆಲಿಕಾಂ ಬಳಕೆದಾರರು ಅಧಿಕ ಡೇಟಾ ಜೊತೆಗೆ ದೀರ್ಘ ಅವಧಿಯ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳು ಆಕರ್ಷಕ ವ್ಯಾಲಿಡಿಟಿಯ ಯೋಜನೆಗಳನ್ನು ಪರಿಚಯಿಸಿವೆ. ಆ ಪೈಕಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್‌ ಜಿಯೋ ಟೆಲಿಕಾಂನ ಕೆಲವು ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದಿಂದ ಗಮನ ಸೆಳೆದಿರುವ ಜೊತೆಗೆ ಡೇಟಾ ಪ್ರಯೋಜನ ಸಹ ಪಡೆದಿವೆ.

ಯೋಜನೆಗಳು

ಹೌದು, ಜಿಯೋ ಟೆಲಿಕಾಂನ ಬಹುತೇಕ ಯೋಜನೆಗಳು ಹೆಚ್ಚಿನ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯ ಹೊಂದಿವೆ. ಆದರೆ ಅವುಗಳಲ್ಲಿ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡ ವಾರ್ಷಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಹೆಚ್ಚು ಡಿಮ್ಯಾಂಡ್‌ ಪಡೆದಿವೆ. ಮತ್ತೆ ಕೆಲವು ಯೋಜನೆಗಳು ದೈನಂದಿನ ಡೇಟಾ ಹೊಂದಿರದೆ ಇದ್ದರೂ ಅಧಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳು ಹೆಚ್ಚು ಅಟ್ರ್ಯಾಕ್ಟ್‌ ಅನಿಸಲಿವೆ. ಹಾಗಾದರೇ ಡೇಟಾ ಪ್ರಯೋಜನದ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದ ಜಿಯೋ ಟೆಲಿಕಾಂನ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2599ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2599ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 2599ರೂ. ಯೋಜನೆಯು ಸಹ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಜೊತೆಗೆ 10GB ಹೆಚ್ಚುವರಿ ಡೇಟಾ ಸಿಗಲಿದೆ. ಪೂರ್ಣ ಅವಧಿಗೆ ಒಟ್ಟು 740GB ಡೇಟಾ ದೊರೆಯಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2121ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2121ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2121ರೂ.ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಇನ್ನು ಈ ಪ್ಲ್ಯಾನ್‌ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪೂರ್ಣ ಅವಧಿಗೆ ಒಟ್ಟು 504GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋ 4999ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 4999ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ಲ್ಯಾನ್ ದೊಡ್ಡ ಮೊತ್ತದ ಪ್ಲ್ಯಾನ್ ಆಗಿದ್ದು, ಒಟ್ಟು 360 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 350GB ಡೇಟಾ ಸೌಲಭ್ಯ ಇರುತ್ತದೆ. ಹಾಗೆಯೇಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಉಳಿದಂತೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳು ಲಭ್ಯವಾಗುತ್ತವೆ.

Best Mobiles in India

English summary
These Jio Prepaid Plans Offers Annual Validity With Daily Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+