ಜಿಯೋ ಗ್ರಾಹಕರೇ ನಿಮಗೆ ಪ್ರತಿದಿನ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಇವೇ ಬೆಸ್ಟ್ ಆಯ್ಕೆ!
ಭಾರತೀಯ ಟೆಲಿಕಾಂ ವಲಯದಲ್ಲಿ ರಿಲಾಯನ್ಸ್ ಜಿಯೋ ಇತರೆ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಸಾಗಿದ್ದು, ಈಗಾಗಲೇ ಹಲವು ಜನಪ್ರಿಯ ಯೋಜನೆಗಳ ಮೂಲಕ ಗಮನ ಸೆಳೆದಿದೆ. ಈ ಟೆಲಿಕಾಂ ಮುಖ್ಯವಾಗಿ ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಹಾಗೆಯೇ ಪ್ರತಿದಿನ 2GB ಹಾಗೂ 3GB ಡೇಟಾ ಪ್ರಯೋಜನದ ಯೋಜನೆಗಳನ್ನು ಒಳಗೊಂಡಿದೆ. ಆ ಪೈಕಿ 2GB ಡೇಟಾ ಪ್ಲ್ಯಾನ್ ಹೆಚ್ಚು ಆಕರ್ಷಕ ಅನಿಸಿವೆ.

ಹೌದು, ಜಿಯೊ ಟೆಲಿಕಾಂ ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಪ್ರಯೋಜನ ಹಾಗೂ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹೀಗಾಗಿ ಜಿಯೋ ಟೆಲಿಕಾಂನ 2GB ಡೇಟಾ ಯೋಜನೆಗಳು ಬಳಕೆದಾರರ ಮೊದಲ ಆಯ್ಕೆ ಆಗಿದೆ. ಜಿಯೋ ಟೆಲಿಕಾಂನ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಜಿಯೋ 249ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 444ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.


Click it and Unblock the Notifications