ಜಿಯೋ ಟೆಲಿಕಾಂನ ಈ ಯೋಜನೆಗಳಲ್ಲಿ ಸಿಗುತ್ತೆ ಭರ್ಜರಿ ವ್ಯಾಲಿಡಿಟಿ ಮತ್ತು ಡೇಟಾ!
ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ಅವಧಿ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.

ಹೌದು, ಜಿಯೋ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಗ್ರಾಹಕರು ಮುಂದಾಗುತ್ತಾರೆ. 84 ದಿನಗಳ ವ್ಯಾಲಿಡಿಟಿಯ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಜಿಯೋ ಟೆಲಿಕಾಂನ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ


Click it and Unblock the Notifications








