ಸೂಪರ್ ವ್ಯಾಲ್ಯೂ ಟ್ಯಾಗ್ ಪಡೆದ ಜಿಯೋ ಪ್ಲ್ಯಾನ್‌ಗಳ ಪ್ರಯೋಜನಗಳೆನು?
ರಿಲಾಯನ್ಸ್ ಜಿಯೋ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಆಕರ್ಷಕ ದರದ ಆಫರ್‌ಗಳ ಮೂಲಕ ಚಂದಾದಾರರನ್ನು ತನ್ನತ್ತ ಸೆಳೆದಿರುವ ಜೊತೆಗೆ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಜಿಯೋ ತನ್ನ ಚಂದಾದಾರರ ಅನುಕೂಲಕ್ಕಾಗಿ ಅಲ್ಪಾವಧಿಯ ಯೋಜನೆಗಳು ಸೇರಿದಂತೆ ಹಲವು ದೀರ್ಘಾವಧಿಯ ಯೋಜನೆಗಳ ಆಯ್ಕೆಗಳನ್ನು ಒಳಗೊಂಡಿದೆ. ಆದರೆ ಅವುಗಳಲ್ಲಿ ಕೆಲವೇ ಕೆಲವು ಪ್ರಿಪೇಯ್ಡ್ ಯೋಜನೆಗಳು ಹೆಚ್ಚು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಗ್ರಾಹಕರಯ ರೀಚಾರ್ಜ್ ಮಾಡಿಸಿಕೊಳ್ಳುವ ಆಧಾರದ ಮೇಲೆ ಕೆಲವು ಪ್ಲ್ಯಾನ್‌ಗಳನ್ನು ಟ್ಯಾಗ್ ಮೂಲಕ ಗುರುತಿಸಲಾಗಿದೆ. ಆ ಪೈಕಿ ಸೂಪರ್ ವ್ಯಾಲ್ಯೂ ಟ್ಯಾಗ್ ಯೋಜನೆಗಳು ಆಕರ್ಷಕ ಎನಿಸಿವೆ.

ಹೌದು, ಜಿಯೋ ಟೆಲಿಕಾಂ ಡೈಲಿ 1GB ಡೇಟಾದಿಂದ ಡೈಲಿ 3GB ಡೇಟಾ ಪ್ರಯೋಜನದ ಪ್ರೀಪೇಯ್ಡ್ ಯೋಜನೆಗಳನ್ನು ಹೊಂದಿದೆ. ಅಲ್ಲದೇ ಅಧಿಕ ವ್ಯಾಲಿಡಿಟಿ ಇರುವ ಯೋಜನೆಗಳು ಇವೆ. ಇನ್ನು ಬಹುತೇಕ ಎಲ್ಲ ಪ್ರಿಪೇಯ್ಡ್ ಯೋಜನೆಗಳು ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಎಸ್‌ಎಮ್‌ಎಸ್ ಪ್ರಯೋಜನವನ್ನು ಪಡೆದಿವೆ. ಕೆಲವು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿಯಾಗಿ ಓಟಿಟಿ ಆಪ್‌ಗಳ ಆಕ್ಸಸ್ ಸೌಲಭ್ಯ ಸಹ ಇದೆ. ಆದರೆ ಕೆಲವು ಯೋಜನೆಗಳು ಅತ್ಯುತ್ತಮ ಡೇಟಾ, ಆಕರ್ಷಕ ವ್ಯಾಲಿಡಿಟಿ ಸೌಲಭ್ಯಗಳನ್ನು ಒಟ್ಟಾಗಿ ಪಡೆದಿವೆ. ಹಾಗಾದರೇ ಜಿಯೋ ಟೆಲಿಕಾಂನಲ್ಲಿ ಸೂಪರ್ ವ್ಯಾಲ್ಯೂ ಹಾಗೂ ಟ್ರೆಂಡಿಂಗ್ ಟ್ಯಾಗ್ ಪಡೆದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 2599ರೂ. ಪ್ರೀಪೇಯ್ಡ್ ಯೋಜನೆ
ಜಿಯೋ ಟೆಲಿಕಾಂನ 2599ರೂ. ಪ್ರೀಪೇಯ್ಡ್ ಯೋಜನೆ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ ಒಟ್ಟು 740GB ಡೇಟಾ ಪ್ರಯೋಜನ ಒದಗಿಸುತ್ತದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳ ಸೇವೆ ಲಭ್ಯ.

ಜಿಯೋ 249ರೂ. ಪ್ರೀಪೇಯ್ಡ್ ಯೋಜನೆ
ಜಿಯೋದ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಲಭ್ಯವಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಸಿಗಲಿದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 349ರೂ. ಪ್ರೀಪೇಯ್ಡ್ ಯೋಜನೆ
ಈ ಯೋಜನೆಯು ಜಿಯೋದ ಯೋಜನೆಗಳ ಪಟ್ಟಿಯಲ್ಲಿ ಟ್ರೆಂಡಿಂಗ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಜಿಯೋದ ಈ ಪ್ರೀಪೇಯ್ಡ್ ಯೋಜನೆ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸೇವೆ ಲಭ್ಯ.


Click it and Unblock the Notifications








