ಜಿಯೋದ ಈ ಮೂರು ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ವ್ಯಾಲಿಡಿಟಿ ಮತ್ತು ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.

ಹೌದು, ಜಿಯೋ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಮದಿನ ಡೇಟಾ ಪ್ರಯೋಜನ ಪಡೆದ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಬಹುತೇಕರು ಮುಂದಾಗುತ್ತಾರೆ. 84 ದಿನಗಳ ವ್ಯಾಲಿಡಿಟಿಯ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಜಿಯೋ ಟೆಲಿಕಾಂನ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 479ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 395ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋದ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 239ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.


Click it and Unblock the Notifications








