ನಿಮಗೆ ಪ್ರತಿದಿನ 3GB ಡೇಟಾ ಬೇಕಿದ್ದರೆ, ಇವೇ ಬೆಸ್ಟ್ ಪ್ಲ್ಯಾನ್‌ಗಳು!
ದೇಶದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವೊಡಾಪೋನ್-ಐಡಿಯಾ (ವಿ ಟೆಲಿಕಾಂ) ಟೆಲಿಕಾಂಗಳು ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಪ್ರತಿದಿನ ಡೇಟಾ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ಅನಿಯಮಿತ ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಪ್ರಯೋಜನವನ್ನು ಸಹ ಹೊಂದಿವೆ. ಆದರೆ ಗ್ರಾಹಕರು ಮುಖ್ಯವಾಗಿ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡಲು ಮುಂದಾಗುತ್ತಾರೆ.

ಹೌದು, ಸದ್ಯ ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳಿಗೆ ಬೇಡಿಕೆ ಹೆಚ್ಚು, ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 1GB, 1.5GB ಮತ್ತು 2GB ಪ್ರಯೋಜನಗಳ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಅನೇಕರು ಚಂದಾದಾರರು ಪ್ರತಿದಿನ 2GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 3GB ಡೇಟಾ ಅಗತ್ಯವಾಗಿದೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ಪ್ರತಿದಿನ 3GB ಡೇಟಾ ಹಾಗೂ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 349ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್ ಸೇವೆ ಲಭ್ಯ.

ಏರ್‌ಟೆಲ್ 448ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 448ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಹಾಟ್‌ಸ್ಟಾರ್ ಸೇವೆಗಳು ಲಭ್ಯ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್ ಯೋಜನೆ
ವಿ ಟೆಲಿಕಾಂನ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ.

ವಿ ಟೆಲಿಕಾಂನ 801ರೂ. ಪ್ರೀಪೇಯ್ಡ್ ಯೋಜನೆ
ವಿ ಟೆಲಿಕಾಂನ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲಾನ್
ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.


Click it and Unblock the Notifications








